Saturday, October 17 , 2020
ಸೈಕಲ್ ನಲ್ಲಿ ತೆರಳಿದ್ದ ಬಾಲಕಿ ರಾತ್ರಿಯಾದರೂ ಬರಲಿಲ್ಲ! | ಬೆಳಗ್ಗೆ ಕಾದಿತ್ತು ಪೋಷಕರಿಗೆ ಶಾಕ್ | ಒಂದು ಮನಕರಗಿಸುವ ಘಟನೆ

ಹೈದರಾಬಾದ್(19.09.2020): ರಸ್ತೆ ಹಾಗೂ ಚರಂಡಿ ಸರಿ ಸಮವಾಗಿ ನೀರು ಹರಿಯುತ್ತಿದ್ದು, ಇದರಿಂದಾಗಿ ರಸ್ತೆ ಯಾವುದು ನೀರು ಯಾವುದು ಎಂದು ತಿಳಿಯದೇ 12 ವರ್ಷದ ಬಾಲಕಿಯೊಬ್ಬಳು ಸೈಕಲ್ ನಲ್ಲಿ ಪ್ರಯಾಣಿಸಿದ್ದು, ಆಕೆ ನೀರು ಪಾಲಾಗಿ ಮೃತಪಟ್ಟ ಘಟನೆ ಹೈದರಾಬಾದ್ ನಲ್ಲಿ ಗುರುವಾರ ಸಂಜೆ ನಡೆದಿದೆ.


ಮೃತಪಟ್ಟ ಸಂತ್ರಸ್ತ ಬಾಲಕಿಯನ್ನು ಸುಮೇಧಾ(12) ಎಂದು ಗುರುತಿಸಲಾಗಿದೆ. ಬಾಲಕಿಯು ಸೈಕಲ್ ನಲ್ಲಿ  ಜಾಯ್ ರೈಡ್ ಮಾಡುತ್ತಿದ್ದಳು. ಇದೇ ಸಂದರ್ಭದಲ್ಲಿ ರಸ್ತೆ ಯಾವುದು, ನೀರು ಯಾವುದು ಎಂದು ಸ್ಪಷ್ಟವಾಗಿ ಗೋಚರಿಸದ ಕಾರಣ ಆಕೆ ಚರಂಡಿ(ತೋಡು)ಗೆ ಬಿದ್ದು, ಕೊಚ್ಚಿಕೊಂಡು ಹೋಗಿದ್ದು, ಶುಕ್ರವಾರ ಇಲ್ಲಿನ  ಬಂಡಾ ಚೆರುವಿನಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ.


ಇನ್ನೂ ಬಾಲಕಿಯ ಮೃತದೇಹವನ್ನು ಜಿಎಚ್‌ಎಂಸಿ ಸಿಬ್ಬಂದಿ ಹೊರ ತೆಗೆದಿದ್ದಾರೆ. ಬಾಲಕಿಯ ಸೈಕಲ್ ಚರಂಡಿಗೆ ಸಿಕ್ಕಿಹಾಕಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು.  ಈ ಪ್ರದೇಶದಿಂದ ಸುಮಾರು 2 ಕಿ.ಮೀ. ದೂರದಲ್ಲಿ ಬಾಲಕಿಯ ಮೃತದೇಹ ದೊರಕಿದೆ.


ಗುರುವಾರ ರಾತ್ರಿ 9 ಗಂಟೆಯವರೆಗೂ ಬಾಲಕಿ ಸುಮೇಧಾ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಆಕೆಯ ಪೋಷಕರಾದ ಅಭಿಜಿತ್ ಕಪುರಿಯಾ ಮತ್ತು ಸುಕನ್ಯಾ ಕಪುರಿಯಾ ನೆರೆಡ್‌ಮೆಟ್ ಪೊಲೀಸರನ್ನು ಸಂಪರ್ಕಿಸಿ ತಮ್ಮ ಮಗಳು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು. ಇನ್ನೂ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದು, ವರದಿಯ ಬಳಿಕ ಬಾಲಕಿಯ ಸಾವಿಗೆ ನಿಖರ ಕಾರಣಗಳನ್ನು ತಿಳಿಸಲಾಗುತ್ತದೆ ಎಂದು ಹೇಳಲಾಗಿದೆ.


Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]