Sunday, May 9 , 2021
ಸಿಎಂ ಆಗುವ ಎಲ್ಲಾ ಲಕ್ಷಣಗಳು ನನ್ನಲ್ಲಿವೆ: ಬಸನಗೌಡ ಪಾಟೀಲ ಯತ್ನಾಳ್

ವಿಜಯಪುರ (15.04.2021) : ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆಗಳು ನನ್ನಲ್ಲಿವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಆಕಾಂಕ್ಷಿಗಳ ಪಟ್ಟಿಯಲ್ಲಿ ನನ್ನ ಹೆಸರು ಏಕೆ ಇರಬಾರದು? ನಾನು ಸಮರ್ಥ ಹಾಗೂ ಎಲ್ಲಾ ರೀತಿಯಿಂದಲೂ ಅರ್ಹನಾಗಿದ್ದೇನೆ ಎಂದಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಗೌರವ ತರುವ ಕೆಲಸ ಮಾಡುತ್ತೇನೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ರೀತಿಯಲ್ಲಿ ಉತ್ತಮ ಆಡಳಿತವನ್ನು ಕರ್ನಾಟಕದಲ್ಲಿ ನೀಡುವೆ. ವಿಜಯಪುರ ಜಿಲ್ಲೆಯವನಾದ ನಾನು ಮುಖ್ಯಮಂತ್ರಿಯಾಗಲು ಸಮರ್ಥನಾಗಿದ್ದೇನೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದಾರೆ.

ಮುಖ್ಯಮಂತ್ರಿಯಾಗಲು ಉತ್ತರ ಕರ್ನಾಟಕದವರೂ ಸಮರ್ಥರಿದ್ದಾರೆ. ಹಾಗಾಗಿ ನಾನು ಸಿಎಂ ಹುದ್ದೆ ಆಕಾಂಕ್ಷಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]