Friday, March 5 , 2021
ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ

ಹಾಸನ (22.02.2021) : ಐಎಂಎ ಹಗರಣದಲ್ಲಿ ನನ್ನ ಪಾತ್ರವಿಲ್ಲ ಎಂದು ಹೆಚ್​ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಭಾನುವಾರ ಭಾಗವಹಿಸಿ, ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಶಾಸಕರೊಬ್ಬರು ಇಫ್ತಿಯಾರ್ ಊಟಕ್ಕೆ ಕರೆದುಕೊಂಡು ಹೋಗಿದ್ದ ವೇಳೆ ಆ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಹಾಕಿದ್ದರು. ಅಲ್ಲಿದ್ದ ಇಬ್ಬರು ವ್ಯಕ್ತಿಗಳು ಯಾರು ಎಂದು ಗೊತ್ತಿರಲಿಲ್ಲ. ದೇಶದಲ್ಲಿ ಅತಿ ಹೆಚ್ಚಿನ ಆದಾಯ ತೆರಿಗೆ ಪಾವತಿಸಿರುವ ಸಂಸ್ಥೆ ಎಂದು ನರೇಂದ್ರ ಮೋದಿ ಪ್ರಮಾಣ ಪತ್ರ ನೀಡಿದ್ದಾರೆ ಅಂತ ಅಲ್ಲಿದ್ದ ವ್ಯಕ್ತಿಯನ್ನು ನನಗೆ ಪರಿಚಯಿಸಿದ್ದರು. ಸಿಸಿಬಿ ತನಿಖೆ ನಡೆದಿದೆ. ಸಿಬಿಐ ತನಿಖೆಯೂ ನಡೆಯುತ್ತಿದೆ ಎಂದು ತಿಳಿಸಿದರು.

ಇನ್ನು ಮೀಸಲಾತಿ ಸಂಬಂಧ ಮಾತನಾಡಿದ ಅವರು, ಜನಗಣತಿ ವರದಿ ಆಧರಿಸಿ ಮೀಸಲಾತಿ ನೀಡಬೇಕೆಂಬ ಮಾತು ಕೇಳಿ ಬಂದಿದೆ. ಈ ಹೋರಾಟ ಸಮಾಜದಲ್ಲಿ ಸಂಘರ್ಷಗಳಿಗೆ ಎಡೆ ಮಾಡಿಕೊಡದೆ ಪ್ರತಿಯೊಂದು ಸಮಾಜದ ಕಡುಬಡವರ ಪರಿಸ್ಥಿತಿ ಆಧಾರದ ಮೇಲೆ ರಾಜಕೀಯ ಬೆರಸದೆ ಅರ್ಹರಿಗೆ ಮೀಸಲಾತಿ ಸದುಪಯೋಗ ಆಗಬೇಕು ಎಂದು ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]