Monday, July 26 , 2021
ಬೆಂಗಳೂರನ್ನು ಮಾದರಿ ನಗರ ಮಾಡುತ್ತೇನೆ: ಸಿಎಂ

ಬೆಂಗಳೂರು (29.06.2021) :  ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಪೆರಿಪರಲ್ ರಸ್ತೆ ನಿರ್ಮಾಣ, ಉಪನಗರ ರೈಲು ಯೋಜನೆ ಸೇರಿದಂತೆ ಹಲವಾರು ಅಭಿವೃದ್ದಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ ಸರ್ಕಾರ ಸಕಲ ಸಿದ್ದತೆ ಮಾಡಿಕೊಂಡಿದೆ ಎಂದು ಮಾಹಿತಿ ನೀಡಿದರು.

ಕೆಂಪೇಗೌಡರು ನಾಡಿನ ಅಭಿವೃದ್ಧಿಗೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರು ಐದು ಶತಮಾನಗಳ ಹಿಂದೆಯೇ ಬೆಂಗಳೂರನ್ನು ಕಟ್ಟಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿ ನಗರವನ್ನು ಅಭಿವೃದ್ಧಿಪಡಿಸಿದ್ದರು. ಅವರ ಹೆಸರು ಅಜರಾಮರವಾಗಿಸುವ ನಿಟ್ಟಿನಲ್ಲಿ ಕೆಂಪೇಗೌಡ ಅಧ್ಯಯನ ಪೀಠಕ್ಕೆ ಚಾಲನೆ ನೀಡಲಾಗಿದೆ ಎಂದರು.

ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸಲು ನಮ್ಮ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಬೆಂಗಳೂರು ಮಿಷನ್-2022 ಯೋಜನೆಯ ಮೂಲಕ ಸುಗಮ ಸಂಚಾರ, ಹಸಿರು ಬೆಂಗಳೂರು ಕಾರ್ಯಕ್ರಮ, ಸ್ವಚ್ಛ, ಸುಂದರ ನಗರವನ್ನಾಗಿ ಮಾರ್ಪಡಿಸುವುದು, ಜನರ ಕುಂದುಕೊರತೆಗಳಿಗೆ ಶೀಘ್ರ ಸ್ಪಂದಿಸುವುದಾಗಿ ಭರವಸೆ ನೀಡಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]