Friday, December 4 , 2020
ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪದಾರ್ಪಣೆ ಮಾಡ್ಬೇಕಾದ್ರೆ ಕನಿಷ್ಠ 15 ವರ್ಷ ಕಡ್ಡಾಯ

ದುಬೈ(20.11.2020): ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಆಡಬೇಕಾದರೆ 15 ವರ್ಷ ತುಂಬಿರಬೇಕು ಎಂದು ಐಸಿಸಿ ನಿಗದಿಪಡಿಸಿದೆ. ಕೇವಲ ಸೀನಿಯರ್​ ಕ್ರಿಕೆಟ್​ಗಲ್ಲದೆ 19 ವಯೋಮಿತಿ ಕ್ರಿಕೆಟ್ ಪಂದ್ಯಗಳಿಗೂ ಈ ಕನಿಷ್ಠ ವಯಸ್ಸಿನ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದೆ.

ಆಟಗಾರರ ಸುರಕ್ಷತೆ ದೃಷ್ಟಿಯಿಂದ ಈ ಕನಿಷ್ಠ ವಯೋಮಿತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಐಸಿಸಿ ಪ್ರಕಟಣೆಯಲ್ಲಿ ತಿಳಿಸಿದೆ. ಇದಕ್ಕು ಮುನ್ನ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಯಾವುದೇ ವಯಸ್ಸಿನ ನಿರ್ಬಂಧ ಇರಲಿಲ್ಲ. ಹಾಗಾಗಿ ಕೆಲವು ಕ್ರಿಕೆಟಿಗರು 14 ವರ್ಷಕ್ಕೆ ಪದಾರ್ಪಣೆ ಮಾಡಿದ್ದರು.

ಪಾಕಿಸ್ತಾನದ ಹಸನ್ ರಾಜಾ 14 ವರ್ಷ, 227 ದಿನ ವಯಸ್ಸಿನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇಲ್ಲಿಯವರೆಗೆ ಅಂತಾಷ್ಟ್ರೀಯ ಕ್ರಿಕೆಟ್​ನಲ್ಲಿ ಪದಾರ್ಪಣೆ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಇದೀಗ ಕನಿಷ್ಠ ವಯೋಮಿತಿ ನಿಗಧಿಯಾಗಿರುವುದರಿಂದ ಅವರ ಈ ದಾಖಲೆ ದಾಖಲೆ ಶಾಶ್ವತವಾಗಿ ಅವರ ಹೆಸರಿನಲ್ಲೇ ಉಳಿದುಕೊಳ್ಳಲಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]