Wednesday, June 23 , 2021
ವಿಶ್ವದ ಪ್ರಮುಖ ಸಂಶೋಧನಾ ವಿವಿಯಲ್ಲಿ ಬೆಂಗಳೂರಿನ ಐಐಎಸ್ಸಿಗೆ ನಂ. 1 ಸ್ಥಾನ

ಬೆಂಗಳೂರು (10.06.2021) : ಭಾರತದ ಮೂರು ವಿಶ್ವವಿದ್ಯಾಲಯಗಳು ಕ್ಯೂ.ಎಸ್. ವಿಶ್ವವಿದ್ಯಾಲಯ ಶ್ರೇಯಾಂಕಗಳ 2022ರಲ್ಲಿ ಉನ್ನತ 200 ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಬೆಂಗಳೂರಿನ ಐ.ಐ.ಎಸ್.ಸಿ.ಯು ಸಂಶೋಧನೆಗೆ ಸಂಬಂಧಿಸಿದ ಪಟ್ಟಿಯಲ್ಲಿ ವಿಶ್ವದಲ್ಲಿಯೇ ಒಂದನೇ ಸ್ಥಾನದಲ್ಲಿದೆ.

ಜಾಗತಿಕ ಉನ್ನತ ಶಿಕ್ಷಣ ವಿಶ್ಲೇಷಣಾ ಸಂಸ್ಥೆ ಕ್ಯೂಎಸ್ ಕ್ವಾಕರೇಲಿ ಸೀಮಂಡ್ಸ್ ಜಾಗತಿಕ ಅಂತಾರಾಷ್ಟ್ರೀಯ ಶ್ರೇಯಾಂಕಗಳ 18 ನೇ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಐ.ಐ.ಟಿ. ಬಾಂಬೆ 177 ನೇ ಸ್ಥಾನವನ್ನು ಗಳಿಸಿದೆ. ಐ.ಐ.ಟಿ. ದಿಲ್ಲಿ 185 ನೇ ಸ್ಥಾನ ಪಡೆದಿದೆ ಮತ್ತು ಐ.ಐ.ಎಸ್.ಸಿ ಬೆಂಗಳೂರು, ವಿಶ್ವವಿದ್ಯಾಲಯಗಳ ಶ್ರೇಯಾಂಕಗಳಲ್ಲಿ 186 ನೇ ಸ್ಥಾನ ಪಡೆದಿದ್ದು, ಕೇಂದ್ರ ಶಿಕ್ಷಣ ಸಚಿವರಾದ ರಮೇಶ ಪೋಖ್ರಿಯಾಲ್ ಅಭಿನಂದಿಸಿದ್ದಾರೆ.

ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಭಾರತವು ದಾಪುಗಾಲಿಕ್ಕುತ್ತಿದೆ ಮತ್ತು ಅದು ವಿಶ್ವಗುರುವಾಗಿ ಹೊರಹೊಮ್ಮುತ್ತಿದೆ ಎಂದು ಶ್ರೀ ಪೋಖ್ರಿಯಾಲ್ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಯು.ಎಸ್. ಜಗತ್ತಿನ ವಿಶ್ವವಿದ್ಯಾಲಯಗಳ ಶ್ರೇಯಾಂಕ 2022ರ ಮೊದಲ 200ರಲ್ಲಿ ಸ್ಥಾನ ಪಡೆದಿರುವ ಐಐಟಿ ಬಾಂಬೆ, ಐಐಟಿ ದೆಹಲಿ ಮತ್ತು ಐಐಎಸ್ಸಿ ಬೆಂಗಳೂರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]