Friday, December 4 , 2020
ಸ್ಯಾಂಡಲ್​ವುಡ್ ಡ್ರಗ್ಸ್​ ಕೇಸ್​: ಸಿಸಿಬಿ ಪೊಲೀಸರಿಂದ ವಿವೇಕ್​ ಒಬೆರಾಯ್​ ಮನೆ ತಪಾಸಣೆ
vivek

ಬೆಂಗಳೂರು(15.10.2020): ಸ್ಯಾಂಡಲ್​ವುಡ್​ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಆದಿತ್ಯ ಆಳ್ವಾ ತಲೆ ಮರಿಸಿಕೊಂಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ತಪಾಸಣೆ ನಡೆಸಿದ್ದಾರೆ.

ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ತಲೆಮರೆಸಿಕೊಂಡಿದ್ದು, ಆತನನ್ನು ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ ಆದಿತ್ಯ ಆಳ್ವಾ ಪತ್ತೆಯಾಗಿಲ್ಲ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಪತ್ನಿಯ ಸಹೋದರನಾಗಿರುವ ಹಿನ್ನೆಲೆಯಲ್ಲಿ ವಿವೇಕ್ ಆತನಿಗೆ ಆಶ್ರಯ ನೀಡಿರುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.



ಈಗಾಗಲೇ ಬಂಧಿತರಾಗಿರುವ ಬಹಳಷ್ಟು ಮಂದಿ ಆರೋಪಿಗಳು ಆದಿತ್ಯ ಆಳ್ವಾ ಅವರ ಹೆಸರನ್ನು ಹೇಳಿದ್ದು, ಮಾದಕ ನಶೆಗೆ ಸಂಬಂಧಪಟ್ಟಂತೆ ಬಹಳಷ್ಟು ಪಾರ್ಟಿಗಳು ಆದಿತ್ಯ ಆಳ್ವಾ ಅವರ ಒಡೆತನಕ್ಕೆ ಸೇರಿದ ಹೌಸ್ ಆಫ್ ಲೈಫ್ ರೆಸಾರ್ಟ್‍ನಲ್ಲೇ ನಡೆದಿವೆ ಎಂದು ಹೇಳಲಾಗಿದೆ.

ಸಿಸಿಬಿ ಪೊಲೀಸರು ಪ್ರತಿದಿನ ಮಾಹಿತಿ ಕಲೆಹಾಕಿದ್ದು, ನಾಪತ್ತೆಯಾಗಿರುವ ಆದಿತ್ಯ ಆಳ್ವಾ ಸಂಬಂಕರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಮಾಹಿತಿ ಸಿಕ್ಕಿರುವುದರಿಂದ ಆದಿತ್ಯ ಆಳ್ವಾರ ಭಾವನಾಗಿರುವ ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆಯಲ್ಲಿ ಅಡಗಿದ್ದಾರೆ ಎಂಬ ಮಾಹಿತಿ ಆಧರಿಸಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ ನ್ಯಾಯಾಲಯದಿಂದ ಸರ್ಚ್​ ವಾರೆಂಟ್ ಪಡೆದು ಸಿಸಿಬಿ ಪೊಲೀಸರ ತಂಡ ಮುಂಬೈಗೆ ತೆರಳಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]