Friday, October 16 , 2020
ರಿಷಭ್ ಪಂತ್​​ಗೆ ವೈದ್ಯರ ಸಲಹೆ ಮೇರೆಗೆ ಒಂದು ವಾರ ವಿಶ್ರಾಂತಿ: ಶ್ರೇಯಸ್​ ಅಯ್ಯರ್​

ಅಬುಧಾಬಿ(12.10.2020) : ಗಾಯಗೊಂಡಿರುವ ವಿಕೆಟ್ ‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರಿಗೆ ಒಂದು ವಾರ ವಿಶ್ರಾಂತಿ ನೀಡುವಂತೆ ವೈದ್ಯರು ಸಲಹೆ ನೀಡಿದ್ದು, ಡೆಲ್ಲಿ ಕ್ಯಾಪಿಟಲ್ಸ್​​ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.

ಕಳೆದ ಶುಕ್ರವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಪಂತ್​​ ಗಾಯಗೊಂಡಿದ್ದರು. ಭಾನುವಾರ ಮುಂಬೈ ಇಂಡಿಯನ್ಸ್​​ ವಿರುದ್ಧದ ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಶ್ರೇಯಸ್​ ಅಯ್ಯರ್​ ಅವರು, ರಿಷಭ್​​ ಪಂತ್​​ ಯಾವಾಗ ಬರ್ತಾರೆ ಎಂಬುದು ನಮಗೆ ತಿಳಿದಿಲ್ಲ. ವೈದ್ಯರು ಅವರಿಗೆ ಒಂದು ವಾರ ವಿಶ್ರಾಂತಿ ಪಡೆಯಬೇಕು ಎಂದಿದ್ದಾರೆ. ಬಳಿಕ ಅವರು ಸಂಪೂರ್ಣವಾಗಿ ಗುಣಮುಖರಾಗಿ ಹಿಂತಿರುಗುತ್ತಾರೆಂದು ಭಾವಿಸುತ್ತೇವೆ ಎಂದಿದ್ದಾರೆ.



ನಿನ್ನೆಯ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ, ನಾಯಕ ಶ್ರೇಯಸ್‌ ಅಯ್ಯರ್ (42) ಹಾಗೂ ಅನುಭವಿ ಶಿಖರ್ ಧವನ್‌ (69) ಅವರ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 162 ರನ್‌ ಗಳಿಸಿತ್ತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]