Friday, October 16 , 2020
ಐಪಿಎಲ್ 2020: ಇದು ನಮಗೆ ಸರಿಯಾದ ದಿನ ಎಂದ ನಾಯಕ ರೋಹಿತ್ ಶರ್ಮಾ

ಅಬುಧಾಬಿ(12.10.2020) : ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್​, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್​ಗಳ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದರಿಂದ ಉಲ್ಲಾಸಗೊಂಡಿರುವ ನಾಯಕ ರೋಹಿತ್ ಶರ್ಮಾ ತಮ್ಮ ತಂಡಕ್ಕೆ ಇದು “ಸರಿಯಾದ ದಿನ” ಎಂದಿದ್ದಾರೆ.

ಈ ಪಂದ್ಯದಲ್ಲಿ ಕ್ವಿಂಟನ್ ಡಿ ಕಾಕ್ ಮತ್ತು ಸೂರ್ಯಕುಮಾರ್ ಯಾದವ್ ಅರ್ಧಶತಕ ಗಳಿಸಿದ್ದಾರೆ. ಡಿ ಕಾಕ್‌ 36 ಎಸೆತಗಳಲ್ಲಿ 3 ಸಿಕ್ಸರ್,‌ 4 ಬೌಂಡರಿ ಸಹಿತ 53 ರನ್‌ ಗಳಿಸಿದರೆ, ಯಾದವ್‌ 32 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಿತ 53 ರನ್‌ ಬಾರಿಸುವ ಮೂಲಕ ತಂಡವನ್ನು ಜಯದತ್ತಾ ಕೊಂಡೊಯ್ದಿದ್ದಾರೆ.



“ನಾವು ಈಗ ಆಡಿರುವ ಆಟ ನಮಗೆ ಸಾಕಷ್ಟು ಆತ್ಮವಿಶ್ವಾಸವನ್ನು ನೀಡಿದೆ. ನಾವು ಇದೇ ರೀತಿ ಮುಂದೆಯೂ ಆಡಬೇಕಾಗಿರುವುದು ಬಹಳ ಮುಖ್ಯವಾಗಿದೆ. ಈ ದಿನ ನಮಗೆ ಒಂದು ಪರಿಪೂರ್ಣ ದಿನವಾಗಿದೆ. ನಾವು ಅಂಕ ಪಟ್ಟಿಯಲ್ಲಿ ಪ್ರಥಮ ಸ್ಥಾನಕ್ಕೇರಿರುವುದು ಸಂತೋಷ ತಂದಿದೆ ಎಂದು” ಎಂದು ಪಂದ್ಯದ ನಂತರ ಶರ್ಮಾ ಹೇಳಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]