Friday, January 15 , 2021
ಕನ್ನಡಕ್ಕೆ ಚಟ್ಟ ತಯಾರು : ಜಗ್ಗೇಶ್​ ಹೀಗಂದಿದ್ಯಾಕೆ! ?
jaggesh

ಡೆಸ್ಕ್​ (03.12.2020) : ಪ್ಯಾನ್ ಇಂಡಿಯಾ ನಮ್ಮನ್ನು ಉದ್ಧಾರ ಮಾಡಲ್ಲ, ಯಾರನ್ನೋ ಮೆಚ್ಚಿಸೋಕೆ ಪ್ಯಾನ್ ಇಂಡಿಯಾ ಮಾಡ್ತಾವ್ರೆ ಎಂdಉ ಜಗ್ಗೇಶ್​ ಹೇಳಿದ್ದರು. ಇದಕ್ಕೆ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ ಮತ್ತೊಂದು ಟ್ವೀಟ್​ ಮಾಡಿ ಕನ್ನಡಿಗರಿಗೆ ಎಚ್ಚರಿಕೆ ನೀಡಿದ್ದಾರೆ.

ರಾಯರ ನಂಬಿ ಬದುಕುವ ನಾನು ಹೃದಯದಿಂದ ಮುಂದಿನ ಪೀಳಿಗೆ ಉದ್ಧಾರಕ್ಕೆ ಸತ್ಯನುಡಿದೆ. ಅರಿವಾಗದ ಬಹುತೇಕರು ನೆಗೆಟಿವ್​​​ ಆಗಿ ತೆಗೆದುಕೊಂಡು ಉತ್ತಮ ಮಾಹಿತಿ ಅಣಕ ಚರ್ಚೆಗೆ ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಂಡರು! ಮುಂದೈತೆ ಕನ್ನಡಿಗರೆ ಊರಬ್ಬ! ಆಗ ಅಯ್ಯೋ ಜಗ್ಗೇಶ ಅಂದೇ ಹೇಳಿದ, ನಾವು ಅಣಿಕಿಸಿದೆವು ಎಂದು ಪಶ್ಚಾತಾಪ ಪಡುತ್ತೀರ! ಅನುಭವಿಸಿ ಕನ್ನಡಕ್ಕೆ ಚಟ್ಟ ತಯಾರು! ಎಂದು ಟ್ವೀಟ್​ ಮಾಡಿದ್ದಾರೆ.

ರಾಯರ ಮಕ್ಕಳ ನೋಯಿಸಿದವರು ಉದ್ಧಾರವಿಲ್ಲಾ! ನನ್ನ ದೇಹದ ಮೇಲೆ ಉಸಿರಿನ ಜೊತೆಗೆ ರಾಯರು ಬೆರೆತಿದ್ದಾರೆ! ನನ್ನ ಬಗ್ಗೆ ಎಲ್ಲ ಅಣಕದ ಮಾತು ರಾಯರ ಬೃಂದಾವನಕ್ಕೆ ಸಮರ್ಪಣೆ ನೋಡುತ್ತಿರಿ, ನನ್ನ ಅಪಮಾನಿಸಿದವರು ಹೇಗೆ ಅಪಮಾನಿತರಾಗುತ್ತಾರೆ ಸಮಾಜದಲ್ಲಿ ಮುಂದೆ! ಕನ್ನಡದ ಅನ್ನ ತಿಂದು ಕನ್ನಡದ ಮಕ್ಕಳಿಗಾಗಿ ಆಡಿದ ಮಾತು ಸ್ವಾರ್ಥಕ್ಕೆ ಬಳಕೆಯಾಗಿ ದುಃಖವಾಯಿತು ಎಂದು ಜಗ್ಗೇಶ್ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]