Wednesday, June 23 , 2021
BIG BREAKING NEWS: ಕನ್ನಡದ ಅತಿ ದೊಡ್ಡ ಬಿಗ್ ಬಾಸ್ ರಿಯಾಲಿಟಿ ಕಾರ್ಯಕ್ರಮ ರದ್ದು

ಬಿಡದಿ (08-05-2021): ರಾಜ್ಯದಲ್ಲಿ ಕರೋನಾ ವೈರಸ್ ಆರ್ಭಟ ಹೆಚ್ಚಾಗಿರುವುದರಿಂದ ರಾಜ್ಯ ಸರ್ಕಾರ ಮೇ 10 ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ ಮಾಡಲು ಆದೇಶ ಮಾಡಿರುವುದರಿಂದ ಕನ್ನಡದ ಅತಿ ದೊಡ್ಡ ರಿಯಾಲಿಟಿ ಕಾರ್ಯಕ್ರಮವಾದ ಬಿಗ್ ಬಾಸ್ ಕಾರ್ಯಕ್ರಮವನ್ನು ನಾಳೆ ರದ್ದು ಮಾಡುವುದಾಗಿ ಕಲರ್ಸ್ ಕನ್ನಡ ವಾಹಿನಿಯ ಮುಖ್ಯಸ್ಥ ಪರಮೇಶ್ವರ್ ಗುಂಡ್ಕಲ್ ಫೇಸ್ಬುಕ್ ಮೂಲಕ ತಿಳಿಸಿದ್ದಾರೆ.

ಎಂಟನೇ ಆವೃತ್ತಿಯ ಕನ್ನಡದ ಬಿಗ್ ಬಾಸ್ ಕಾರ್ಯಕ್ರಮವು 72 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ಇನ್ನು ನಾಲ್ಕು ವಾರಗಳಲ್ಲಿ ಕಾರ್ಯಕ್ರಮ ಅಂತ್ಯವಾಗುತ್ತಿತ್ತು ಆದರೆ ರಾಜ್ಯದಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ಬಾರದಿರುವುದರಿಂದ ಅನೇಕ ಸಾವು ನೋವುಗಳನ್ನು ಕಂಡುಬರುತ್ತಿದೆ. ಆದಕಾರಣ ಸ್ಪರ್ಧಿಗಳಿಗೆ ರಾಜ್ಯದ ಪರಿಸ್ಥಿತಿಯನ್ನು ತಿಳಿಸಿ ನಂತರ ಅವರನ್ನು ಸುರಕ್ಷಿತವಾಗಿ ಅವರ ಮನೆಗಳಿಗೆ ತಲುಪಿಸಲಾಗುವುದು. ಇದು ಕಷ್ಟದ ತಿರ್ಮಾನವಾದರೂ ಸೂಕ್ತವಾದ ಕ್ರಮವಾಗಿದೆ ಎಂದು ತಿಳಿಸಿದರು.

ಮೊದಲ ಆವೃತ್ತಿಯಿಂದಲೂ ಖ್ಯಾತ ನಾಯಕ ನಟರಾದ ಕಿಚ್ಚ ಸುದೀಪ್ ನಿರೂಪಕರಾಗಿದ್ದಾರೆ. ಒಟ್ಟು ಹದಿನೇಳು ಸ್ಪರ್ಧಿಗಳು ಮನೆಗೆ ಪ್ರವೇಶ ಪಡೆದಿದ್ದರು. ಮಂಜು ಪಾವಗಡ, ವೈಷ್ಣವಿ, ಅರವಿಂದ್, ಶುಭಾಪುಂಜ, ದಿವ್ಯ ಸುರೇಶ್, ಪ್ರಶಾಂತ್ ಸಂಬರಗಿ, ರಘು, ಶಮಂತ್, ನಿಧಿ ಸುಬ್ಬಯ್ಯ, ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಬಂದಿರುವ ಚಂದ್ರಚೂಡ್ ಮುಂತಾದವರು ಮನೆಯಲ್ಲಿದ್ದರು. ಕರೋನಾ ವೈರಸ್ ನ ಆರ್ಭಟಕ್ಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿದೆ.

ಕಳೆದ ವಾರ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿಯಾದ ಐಪಿಎಲ್ ಅನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿತ್ತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]