Sunday, September 19 , 2021
KPSC ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ರದ್ದು

ಬೆಂಗಳೂರು (25.07.2021)   : ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕರು/ಪ್ರಥಮ ದರ್ಜೆ ಸಹಾಯಕರ ನೇಮಕಾತಿಗೆ ನಡೆಸಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ರದ್ದುಗೊಳಿದೆ.

2020 ರ ಜನವರಿಯಲ್ಲಿ ಸಹಾಯಕರು ಹಾಗೂ ಪ್ರಥಮ ದರ್ಜೆ ಸಹಾಯಕರ ಒಟ್ಟು 1,140 ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಗಡಿನಾಡಿನ ಹಾಗೂ ಹೊರ ರಾಜ್ಯದ ಅಭ್ಯರ್ಥಿಗಳು ಈ ವರ್ಷ ಜನವರಿ 23 ರಂದು ಕಡ್ಡಾಯ ಕನ್ನಡ ಪರೀಕ್ಷೆ ಬರೆದಿದ್ದರು. ಆದರೆ, ಈಗ ನಡೆದಿದ್ದ ಪರೀಕ್ಷೆಯನ್ನೇ ಕೆಪಿಎಸ್ ಸಿ ರದ್ದು ಮಾಡಿದೆ.

ಪ್ರಶ್ನೆ ಸಹಿತ ಉತ್ತರ ಪತ್ರಿಕೆಯಲ್ಲಿ ಬಾರ್ ಕೋಡ್/ತಾಂತ್ರಿಕ ದೋಷ ಉಂಟಾಗಿರುವುದರಿಂದ ಮೌಲ್ಯಮಾಪನ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಪರೀಕ್ಷೆಯನ್ನು ರದ್ದುಪಡಿಸಲು ಜುಲೈ 6 ರಂದು ನಡೆಸಿದ ಸಭೆಯಲ್ಲಿ ತೀರ್ಮಾನಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]