Wednesday, June 23 , 2021
ಅಚ್ಚೇದಿನದ ಕನಸು ಅಂದ್ರೆ ಇದೇನಾ?: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರು (10.06.2021) : ಸರ್ಕಾರ ವಿದ್ಯುತ್‌ ದರ ಏರಿಸಿದೆ. ಯೂನಿಟ್‌ ವಿದ್ಯುತ್‌ ಮೇಲೆ 30 ಪೈಸೆ ಏರಿಸಲಾಗಿದೆ. ಏಪ್ರಿಲ್ ಒಂದರಿಂದ ದರ ಪೂರ್ವಾನ್ವಯವೂ ಆಗಲಿದೆ. ಹಿಂಬಾಕಿಯನ್ನು ಅಕ್ಟೋಬರ್‌-ನವೆಂಬರ್‌ನಲ್ಲಿ ವಸೂಲಿ‌ ಮಾಡಲಾಗುತ್ತದೆ ಎಂದು ಸರ್ಕಾರದ ವಿರುದ್ಧ ಹೆಚ್​ಡಿಕೆ ಕಿಡಿಕಾರಿದ್ದಾರೆ.

ಕೋವಿಡ್‌ ಮತ್ತು ಲಾಕ್‌ಡೌನ್‌ಗಳಲ್ಲಿ ಜನ ಕಷ್ಟಪಟ್ಟು ಜೀವ ಉಳಿಸಿಕೊಂಡಿದ್ದಾರೆ. ತ್ರಾಸದ ಜೀವನ ನಡೆಸಿದ್ದಾರೆ. ಇನ್ನಷ್ಟೇ ದುಡಿದು ಜೀವನ ನಡೆಸಬೇಕಾದ ಜನರ ಮೇಲೆ ಸರ್ಕಾರಕ್ಕೆ ಏಕೆ ದ್ವೇಷ? ಲಾಕ್‌ಡೌನ್‌ ಘೋಷಿಸಿದ್ದ ಸರ್ಕಾರ ವಾಸ್ತವದಲ್ಲಿ ವಿದ್ಯುತ್‌, ನೀರಿನ ಬಿಲ್‌ಅನ್ನು 3 ತಿಂಗಳು ರದ್ದು ಮಾಡಬೇಕಿತ್ತು. ಆದರೀಗ ವಸೂಲಿ ಮಾಡಲು ಮುಂದಾಗಿದೆ ಎಂದು ಹರಿಹಾಯ್ದರು.

ಹಲವು ದೇಶಗಳಲ್ಲಿ, ಅಷ್ಟೇ ಏಕೆ, ಪಕ್ಕದ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವಿದ್ಯುತ್‌ ಬಿಲ್‌ ತಡೆಯಲಾಗಿದೆ. ಅಥವಾ ಕಡಿಮೆ ಮಾಡಲಾಗಿದೆ. ಕೋವಿಡ್‌ ಪ್ಯಾಕೇಜ್‌ನಲ್ಲಿ ಇದನ್ನು ಘೋಷಿಸಲಾಗಿದೆ. ಪ್ಯಾಕೇಜ್‌ನಲ್ಲಿ ಸಮಾನ್ಯ ಜನರನ್ನು ವಂಚಿಸಿದ ರಾಜ್ಯದ ಬಿಜೆಪಿ ಸರ್ಕಾರ ಈಗ ದರ ಏರಿಕೆ, ಬಾಕಿ ವಸೂಲಿ ಮೂಲಕ ದೌರ್ಜನ್ಯದ ಕ್ರಮಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.

ಇದನ್ನೂ ಓದಿ

ನನ್ನ ಮುಂದಿನ ಗುರಿ ನರೇಂದ್ರ ಮೋದಿ ಸರ್ಕಾರವನ್ನು ಅಲುಗಾಡಿಸುವುದು: ಮಮತಾ ಬ್ಯಾನರ್ಜಿ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]