Wednesday, June 23 , 2021
ಬಳ್ಳಾರಿಯ ಜಿಂದಾಲ್ ಕಂಪನಿಗೆ ಭೂಮಿ ಲೀಸ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ಬೆಂಗಳೂರು (08.05.2021): ಕಡಿಮೆ ದರಕ್ಕೆ ಬಳ್ಳಾರಿಯ ಜಿಂದಾಲ್ ಉಕ್ಕು ಕಂಪನಿಗೆ ಭೂಮಿ ಲೀಸ್​ಗೆ ನೀಡಿದ ಸರ್ಕಾರದ ಕ್ರಮಕ್ಕೆ ಬಿಜೆಪಿಯಲ್ಲೇ ಅಪಸ್ವರ ಎದ್ದಿದೆ.

ಈ ಸಂಬಂಧ ಸಿಎಂ ಯಡಿಯೂರಪ್ಪಗೆ ನಿಷ್ಠ ಶಾಸಕರು ಪತ್ರ ಬರೆದು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಬಸನಗೌಡಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ, ಪೂರ್ಣಿಮಾ ಶ್ರೀನಿವಾಸ್, ಉದಯ್ ಗರುಡಾಚಾರ್ ಅವರು ಸಿಎಂಗೆ ಪತ್ರ ಬರೆದು ಜಿಂದಾಲ್​​ಗೆ ಭೂಮಿ ಪರಭಾರೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜಿಂದಾಲ್​​ಗೆ 3667 ಎಕರೆ ಭೂಮಿ ಶುದ್ಧ ಕ್ರಯಪತ್ರ ಮಾಡಿ ಕೊಟ್ಟ ನಿರ್ಧಾರ ಮರು ಪರಿಶೀಲಿಸುವಂತೆ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಸಾವಿರಾರು ಕೋಟಿ ಬೆಲೆ ಬಾಳುವ ಭೂಮಿಯನ್ನು ಕೇವಲ 60 ರಿಂದ 70 ಕೋಟಿ ರೂ.ಗೆ ಶುದ್ಧ ಕ್ರಯಪತ್ರ ಮಾಡಿಕೊಟ್ಡಿದ್ದು ಸರಿಯಲ್ಲ ಎಂದು ಆಗ್ರಹ ಮಾಡಿದ್ದಾರೆ.

ಜಿಂದಾಲ್​​​ಗೆ ಭೂಮಿ ಕೊಟ್ಟ‌ ವಿಚಾರವನ್ನು ಪಕ್ಷದ‌ ವೇದಿಕೆಯಲ್ಲಿ ಚರ್ಚೆ ಮಾಡಬಹುದಿತ್ತು. ಶಾಸಕಾಂಗ ಪಕ್ಷದ ಸಭೆಯಲ್ಲಿ ಅಥವಾ ಬಜೆಟ್ ಅಧಿವೇಶನ ಸಂದರ್ಭದಲ್ಲಾದ್ರೂ ಚರ್ಚಿಸಬಹುದಿತ್ತು. ಮತ್ತೊಮ್ಮೆ ಸಂಪುಟ ಸಭೆಯಲ್ಲಿ ಕೈಗೊಂಡ ಈ‌ ನಿರ್ಧಾರದ ಮರುಪರಿಶೀಲನೆ ಅಗತ್ಯವಿದೆ. ಪಕ್ಷದ ವೇದಿಕೆಯಲ್ಲಿ ಚರ್ಚೆಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]