Wednesday, June 23 , 2021
ರಾಜ್ಯದ 10 ಜಿಲ್ಲೆಗಳಲ್ಲಿ ಜೂನ್ 21 ರವರಗೆ ಲಾಕ್ ಡೌನ್ : ಯಾವೆಲ್ಲಾ ಜಿಲ್ಲೆಗಳಲ್ಲಿ ಅನ್​ಲಾಕ್​?

ಬೆಂಗಳೂರು (10.06.2021) : ರಾಜ್ಯದಲ್ಲಿ ಲಾಕ್​ಡೌನ್​ ಮುಂದುವರೆಯುತ್ತಾ ಎನ್ನುವ ವಿಷಯಕ್ಕೆ ತೆರೆ ಬಿದ್ದಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಹೆಚ್ಚಾಗಿರುವ 120 ಜಿಲ್ಲೆಗಳಲ್ಲಿ ಲಾಕ್ ಡೌನ್ ಜೂನ್ 21ರವರೆಗೆ ಮುಂದುವರೆಯಲಿದೆ. ಇತರೆ ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಗೊಳಿಸಲಾಗುತ್ತಿದೆ. ಆದ್ರೇ ಕರ್ಪ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

ಕಳೆದ ಒಂದೂವರೆ ಎರಡು ಗಂಟೆಯಿಂದ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ, ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಇಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗಿದೆ. ರಾಜ್ಯದದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅನ್ವಯವಾಗುವಂತೆ ಯಾವುದೇ ಮಾರ್ಗಸೂಚಿ ಅನ್ವಯವಾಗುವುದಿಲ್ಲ. ಯಥಾಸ್ಥಿತಿ ಮುಂದುವರೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಹೆಚ್ಚಿನ ಕ್ರಮ ಕೈಗೊಳ್ಳಲು ಅವಕಾಶನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಯಾರಿಗೆಲ್ಲಾ ಅವಕಾಶ:
ದಿನಾಂಕ 21-06-2021ರವರೆಗೆ ಎಲ್ಲಾ ಕಾರ್ಖಾನೆಗಳನ್ನು ಶೇ.50ರಷ್ಟು ಸಿಬ್ಬಂದಿಗಗೆ ಕೆಲಸಕ್ಕೆ ಅವಕಾಶ. ಗಾರ್ಮೆಟ್ಸ್ ಗಳಲ್ಲಿ ಶೇ.30ರಷ್ಟು ನೌಕರರಿಗೆ ಕೆಲಸ ಮಾಡಲು ಅವಕಾಶ. ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಎಲ್ಲಾ ನಿರ್ಮಾಣ ಚಟುವಟಿಕೆ ಪ್ರಾರಂಭಿಸಲು ಆವಕಾಶ. ಪಾರ್ಕ್ ಬೆಳಿಗ್ಗೆ 5 ರಿಂದ 10ರವರೆಗೆ ತೆರೆಯಲು ಅವಕಾಶ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ 2ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆಟೋ ಟ್ಯಾಕ್ಸಿ ಸಂಚಾರಕ್ಕೆ ಇಬ್ಬರು ತೆರಳೋದಕ್ಕೆ ಅವಕಾಶ ನೀಡಲಾಗಿದೆ.

ಕೋವಿಡ್ ಕರ್ಪ್ಯೂ ರಾತ್ರಿ 7 ರಿಂದ ಬೆಳಿಗ್ಗೆ 5 ಜಾರಿಯಲ್ಲಿರಲಿದೆ. ವಾರಾಂತ್ಯ ಕರ್ಪೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿ ಇರಲಿದೆ. ಅನ್ ಲಾಕ್ ಜಾರಿಗೊಳಿಸಿದರೂ, ಬಿಎಂಟಿಸಿ, ಸಾರಿಗೆ ಬಸ್ ಸಂಚಾರ ಆರಂಭಿಸೋದಿಲ್ಲ. ಕೆಲವು ಸರ್ಕಾರಿ ಕಚೇರಿಗಳಿಗೆ ಶೇ.50ರಷ್ಟು ನೌಕರರೊಂದಿಗೆ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ. ಅಂತರ ಜಿಲ್ಲಾ ಓಡಾಟಕ್ಕೂ ಅವಕಾಶ ನೀಡಲಾಗಿದೆ ಎಂದು ಮಾಹಿತಿ ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]