Wednesday, June 23 , 2021
ದಕ್ಷಿಣ ಆಫ್ರಿಕಾದ ನ್ಯಾಯಾಲಯದಿಂದ ಮಹಾತ್ಮ ಗಾಂಧೀಜಿ ಮರಿಮೊಮ್ಮಗಳಿಗೆ ಶಿಕ್ಷೆ

ಜೊಹಾನ್ಸ್‌ಬರ್ಗ್(08.06.2021): ಮಹಾತ್ಮ ಗಾಂಧೀಜಿಯವರ ಮರಿಮೊಮ್ಮಗಳಿಗೆ ದಕ್ಷಿಣ ಆಫ್ರಿಕಾದ ಡರ್ಬನ್​ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ವಂಚನೆ ಹಾಗೂ ನಕಲಿ ದಾಖಲೆ ಸೃಷ್ಟಿ ಪ್ರಕರಣದಲ್ಲಿ ಆಶಿಶ್ ಲತಾ ರಾಮ್ ಗೋಬಿನ್ ಅವರಿಗೆ ಈ ಶಿಕ್ಷೆ ವಿಧಿಸಲಾಗಿದೆ. ಹೋರಾಟಗಾರ್ತಿ ಎಲಾ ಗಾಂಧಿ ಮತ್ತು ದಿವಂಗತ ಮೇವಾ ರಾಮ್ ಬೋಬಿನ್ ಅವರ ಪುತ್ರಿ ಆಶಿಶ್ ಲತಾ ರಾಮ್ ಗೋಬಿನ್​.

ಭಾರತದಿಂದ ದಕ್ಷಿಣ ಆಫ್ರಿಕಾಕ್ಕೆ ತಾವು ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳ ಕಸ್ಟಂ ಸುಂಕಕ್ಕಾಗಿ ದಕ್ಷಿಣ ಆಫ್ರಿಕಾದ ಉದ್ಯಮಿ ಎಸ್‌.ಆರ್‌ ಮಹರಾಜ್‌ ಎಂಬುವವರ ಬಳಿ ಲತಾ 6.2 ದಶಲಕ್ಷ ರಾಂಡ್‌ ಪಡೆದಿದ್ದರು. ತಾವು ಗಳಿಸಿದ ಆದಾಯದಲ್ಲಿ ಪಾಲು ನೀಡುವುದಾಗಿ ಹೇಳಿದ್ದ ಲತಾ ನಂತರದಲ್ಲಿ ಉದ್ಯಮಿಗೆ ವಂಚಿಸಿದ್ದ ಆರೋಪ ಎದುರಿಸುತ್ತಿದ್ದರು.

ಇದೀಗ ಡರ್ಬನ್ ವಾಣಿಜ್ಯ ವ್ಯಾಜ್ಯಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶವನ್ನು ನಿರಾಕರಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]