
ಬೆಂಗಳೂರು(23.1.2021): ಗುಲ್ಬರ್ಗಾ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನೋಯ್ಡಾದ ಫೇಮ್ ಇಂಡಿಯಾ ಎಂಬ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೇಶದ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿಗೆ ಆದರೆ ಆಯ್ಕೆ ಮಾಡಿದೆ.
ದೇಶಾದ್ಯಂತ ಸಮೀಕ್ಷೆ ನಡೆಸಿದ ನಂತರ ಈ ಆಯ್ಕೆ ಮಾಡಲಾಗಿದೆ. ಜನವರಿ 31 ರಂದು ದೆಹಲಿ ವಿಜ್ಞಾನ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಖರ್ಗೆಯವರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಸಂಸ್ಥೆ ಪ್ರಕಟಣೆ ಹೊರಡಿಸಿದೆ.