Monday, March 8 , 2021
ಖ್ಯಾತ ಸಾಹಿತಿ ಹಂಪನಾ ವಿಚಾರಣೆ : ವಿಷಾದ ವ್ಯಕ್ತಪಡಿಸಿದ ಮಂಡ್ಯ ಎಸ್​ಪಿ

ಬೆಂಗಳೂರು (23.1.2021) : ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಮಂಡ್ಯ ಪಶ್ಚಿಮ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆ ಅವರನ್ನ ಠಾಣೆಗೆ ಕರೆಸಿದ್ದಕ್ಕೆ ಮಂಡ್ಯ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ಪರಶುರಾಮ ವಿಷಾದ ವ್ಯಕ್ತಪಡಿಸಿದ್ದಾರೆ.

ಹಂ.ಪ.ನಾಗರಾಜಯ್ಯ ಅವರು ಖ್ಯಾತ ಸಾಹಿತಿಗಳು ಹಾಗೂ ಹಿರಿಯ ನಾಗರೀಕರಾಗಿದ್ದು, ಅವರು ಪೊಲೀಸ್​ ಠಾಣೆಗೆ ಬಂದು ಹೇಳಿಕೆ ನೀಡುವ ಸನ್ನಿವೇಶ ಉದ್ಭವಿಸಿದ ಬಗ್ಗೆ ವಿಷಾದ ವ್ಯಕ್ತಪಡಿಸಲಾಗಿದೆ. ಈ ಘಟನೆಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಡ್ಯ ಉಪ ವಿಭಾಗದ ಡಿಎಸ್​ಪಿ ಅವರಿಗೆ ಸೂಚಿಸಲಾಗಿದೆ ಎಂದು ಎಸ್ಪಿ ಅವರು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.17ರಂದು ನಡೆದ ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ್ದ ಸಾಹಿತಿ ಹಂಪನಾ, ನಮ್ಮ ಪ್ರಜಾಪ್ರಭುತ್ವ ಅಂತ್ಯತ ಕೆಟ್ಟ ಸ್ಥಿತಿಗೆ ಬಂದು‌ ನಿಂತಿದೆ. ರೈತರು 50 ದಿನಗಳ ಕಾಲ ಚಳಿಯನ್ನೂ ಲೆಕ್ಕಿಸದೆ ದೆಹಲಿಯಲ್ಲಿ ಹೋರಾಟ ಮಾಡಿದರೂ ಕೇಂದ್ರ ಸರ್ಕಾರ ರೈತಪರ- ಜನಪರವಾಗಿ ವರ್ತಿಸುತ್ತಿಲ್ಲ. ಧರ್ಮರಾಯನ ಮುಖವಾಡ ಧರಿಸಿ ದುರ್ಯೋಧನನಂತೆ ವರ್ತಿಸುತ್ತಿದೆ. ಗೋಮುಖ ವ್ಯಾಘ್ರನಂತಿದೆ ಎಂದಿದ್ದರು. ಈ ಸಂಬಂಧ ದೂರು ದಾಖಲಾಗಿತ್ತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]