Sunday, January 24 , 2021
ಕೋವಿಡ್ ಬಗ್ಗೆ ನಾಳೆ ಅಧಿಕಾರಿಗಳ ಜೊತೆ ಸಭೆ: ಸಚಿವ ಡಾ.ಕೆ. ಸುಧಾಕರ್

ಬೆಂಗಳೂರು(03.12.2020) : ಕೊರೊನಾ ಎರಡನೇ ಅಲೆ ಬಗ್ಗೆ ತಜ್ಞರು ನೀಡಿರುವ ವರದಿ ಇನ್ನೂ ಕೈಸೇರಿಲ್ಲ. ಅದು ಅಧಿಕಾರಿಗಳ ಮಟ್ಟದಲ್ಲಿದೆ. ಆ ವರದಿ ಮತ್ತು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ತಾಂತ್ರಿಕ ಸಮಿತಿ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜತೆ ನಾಳೆ ಸಭೆ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಹೇಳಿದರು.

ಕೋವಿಡ್‌ನ ಎರಡನೇ ಅಲೆ ಪರಿಣಾಮಕಾರಿಯಾಗಿರುತ್ತದೆ ಎಂದು ವೈಯಕ್ತಿಕವಾಗಿ ತಮಗೆ ಅನ್ನಿಸುತ್ತಿಲ್ಲ. ಆದರೂ ತಜ್ಞರು ನಡೆಸಿರುವ ಅಧ್ಯಯನ ವರದಿಯಲ್ಲಿ ಏನಿದೆ ಎಂಬುದನ್ನು ಪರಶೀಲಿಸಬೇಕಿದೆ. ಯಾವ ಮಟ್ಟದ ಪರಿಣಾಮ? ಯಾವ್ಯಾವ ಪ್ರದೇಶಗಳಲ್ಲಿ ಹೇಗಿರುತ್ತದೆ? ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು? ಈ ಎಲ್ಲಾ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಎಚ್ಚರಿಕೆಯ ಹೆಜ್ಜೆ ಇರಿಸಲಾಗುವುದು ಎಂದು ಹೇಳಿದರು.

ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಶಾಶ್ವತ ಪರಿಹಾರ ಅಲ್ಲ. ಸಾಮಾಜಿಕ ಲಸಿಕೆ ಎಂದೇ ಹೇಳಲಾಗಿರುವ ಮಾಸ್ಕ್‌, ಸಾಮಾಜಿಕ ಅಂತರ ಮತ್ತು ಶುಚಿತ್ವ ಲಸಿಕೆಗಿಂತಲೂ ಹೆಚ್ಚು ಪರಿಣಾಮಕಾರಿ ಎಂಬುದನ್ನು ತಜ್ಞರೇ ಹೇಳಿದ್ದಾರೆ ಇದನ್ನು ಕಟ್ಟಾಯವಾಗಿ ಪಾಲನೆ ಮಾಡಬೇಕು ಎಂದು ತಿಳಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]