Sunday, September 19 , 2021
ಸೆ.25 ರಂದು ವಿಶ್ವಸಂಸ್ಥೆಯಲ್ಲಿ ಮೋದಿ ಭಾಷಣ

ವಿಶ್ವಸಂಸ್ಥೆ (14.09.2021) : ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೆ.25ರಂದು ಭಾಷಣ ಮಾಡಲಿದ್ದಾರೆ.

ಈ ಮಹಾ ಸಭೆಯಲ್ಲಿ ಭಾರತ, ಅಮೆರಿಕ, ಬ್ರೆಜಿಲ್‌ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ನಾಯಕರು ಭೌತಿಕವಾಗಿ ಪಾಲ್ಗೊಳ್ಳಲಿದ್ದಾರೆ.

ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ 193 ಸದಸ್ಯರಾಷ್ಟ್ರಗಳ ವಾರ್ಷಿಕ ಮಹಾ ಅಧಿವೇಶನದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಜೋರ್ಡಾನ್‌ನ ರಾಜಾ ಅಬ್ದುಲ್ಲಾ, ಬ್ರೆಜಿಲ್‌, ವೆನಿಜುಯೆಲಾ ಸೇರಿದಂತೆ ಹಲವು ದೇಶಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.

ಸೆ.24ರಂದು ವಾಷಿಂಗ್ಟನ್‌ನಲ್ಲಿ ‘ಕ್ವಾಡ್’ ಶೃಂಗಸಭೆ ನಡೆಯಲಿದೆ. ಮೋದಿ ಅದರಲ್ಲಿ ಪಾಲ್ಗೊಳ್ಳಲಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]