Sunday, May 9 , 2021
ಆಂಧ್ರಾದ ನಿಗೂಢ ಕಾಯಿಲೆ ಪ್ರಕರಣ 29ಕ್ಕೆ ಏರಿಕೆ: ರೋಗಿಗಳಲ್ಲಿ ವಾಂತಿ, ಜ್ವರ

ಅಮರಾವತಿ (20-01-2021): ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮದೋಳೆ ಮಂಡಲ್​ನ ಪುಲ್ಲ ಗ್ರಾಮದಲ್ಲಿ ನಿಗೂಢ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಬುಧವಾರ 29ಕ್ಕೆ ಏರಿಕೆಯಾಗಿದೆ.

‘ಸಂತ್ರಸ್ತರಲ್ಲಿ ಮೂರ್ಛೆ ರೋಗದ ಲಕ್ಷಣಗಳ ಕಾಣಿಸಿಕೊಳ್ಳುತ್ತಿವೆ. ತಲೆಸುತ್ತುವಿಕೆ, ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದಾರೆ’ ಎಂದು ಸ್ಥಳೀಯ ಪಿಎಚ್​ಸಿಯಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.

‘ರೋಗಿಗಳ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ. ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಪುಲ್ಲ ಮತ್ತು ಸುತ್ತಮುತ್ತಲಿನ ಜನವಸತಿಗಳಲ್ಲಿ ಆಂಬುಲೆನ್ಸ್​ಗಳನ್ನು ಸನ್ನದ್ಧವಾಗಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಸಚಿವ ಅಲ್ಲಾ ಕಾಳಿ ಕೃಷ್ಣ ಶ್ರೀನಿವಾಸ್, ಜಿಲ್ಲಾಧಿಕಾರಿ ಆರ್.ಮುತ್ಯಾಲ ರಾಜು, ಜಂಟಿ ಜಿಲ್ಲಾಧಿಕಾರಿ ಹಿಮಾಂಶು ಶುಕ್ಲಾ ಮತ್ತು ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿದದ್ದಾರೆ. ಶ್ರೀನಿವಾಸ್ ಅವರು ಕಾಲೋನಿಗಳಿಗೆ ಭೇಟಿ ನೀಡಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ, ಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಕುರಿತು ಪರಿಶೀಲನೆ ನಡೆಸಿದರು. ರೋಗಿಗಳ ಕುಟುಂಬ ಸದಸ್ಯರೊಂದಿಗೆ ಸಂವಾದ ನಡೆಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]