
ಬೆಂಗಳೂರು (14.01.2021) : ರಾಜೀನಾಮೆ ನೀಡಿದ ಹೆಚ್ ನಾಗೇಶ್ ಅವರಿಗೆ ಬಿಎಸ್ವೈ ಗುಡ್ ನ್ಯೂಸ್ ನೀಡಿದ್ದಾರೆ.
ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-3 ಪಿಎಸ್ ನಾಗರಾಜ್ ಅಧಿಸೂಚನೆ ಹೊರಡಿಸಿದ್ದಾರೆ.
ದಿನಾಂಕ 21-11-2020ರಂದು ಸಿ.ಮುನಿಕೃಷ್ಣ ಅವರನ್ನು ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಪಡಿಸಲಾಗಿದೆ. ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ನಾಗೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.