
ಲಖನೌ (23.02.2021) : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಶ್ರೀ ರಾಮಚಂದ್ರ ವಿಮಾನ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.
ರಾಜ್ಯ ಸರ್ಕಾರವು ಮಂಡಿಸಿರುವ ಬಜೆಟ್ನಲ್ಲಿ ಈ ಕುರಿತು ಉಲ್ಲೇಖಿಸಲಾಗಿದೆ. ವಿಮಾನ ನಿಲ್ದಾಣಕ್ಕಾಗಿ ₹101 ಕೋಟಿ ಮೀಸಲಿಡಲಾಗಿದೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಿ ಮುಂದೆ ಅದನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮಾಡಲಾಗುವುದು ಎಂದು ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಬಜೆಟ್ನಲ್ಲಿ ತಿಳಿಸಿದ್ದಾರೆ.
ಬಜೆಟ್ ಮಂಡನೆಯ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಲಿಗಡ, ಮೊರಾದಾಬಾದ್, ಮೀರತ್ ನಗರಗಳಿಗೂ ಶೀಘ್ರದಲ್ಲೇ ವಿಮಾನ ಯಾನ ಸೇವೆ ಒದಗಿಸಲಾಗುವುದು ಎಂದು ಹೇಳಿದ್ದಾರೆ.