Sunday, September 19 , 2021
ಆಸ್ಕರ್‌ ಅವಾರ್ಡ್ ನನ್ನ ತಂದೆಯ ಕಾಲಿನ ಧೂಳಿಗೆ, ಭಾರತರತ್ನ ಉಗುರಿಗೆ ಸಮ: ನಂದಮುರಿ ಬಾಲಕೃಷ್ಣ

ಹೈದರಾಬಾದ್ (22.07.2021) : ತೆಲುಗು ಹಿರಿಯ ನಟ, ರಾಜಕಾರಣಿ ಹಾಗೂ ಎನ್.ಟಿ.ರಾಮ ರಾವ್ ಅವರ ಪುತ್ರ ನಂದಮುರಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದು, ಜಾಲತಾಣದಲ್ಲಿ ಜನರಲ್ಲಿ ಭಾರಿ ಕೋಪಕ್ಕೆ ಗುರಿಯಾಗಿದ್ದಾರೆ.

ತೆಲುಗು ಚಿತ್ರರಂಗದ ಸ್ಟಾರ್‌ ನಟರಾಗಿ ದಶಕಗಳ ಕಾಲ ಗುರುತಿಸಿಕೊಂಡಿದ್ದ ಎನ್‌.ಟಿ.ರಾಮರಾವ್‌ (ಎನ್‌ಟಿಆರ್‌) ಅವರ ಪುತ್ರರಾಗಿರುವ ನಂದಮುರಿ ಅವರು, ಭಾರತ ರತ್ನ ನನ್ನ ತಂದೆ ಎನ್‌ಟಿಆರ್‌ ಅವರ ಕಾಲಿನ ಬೆರಳಿನ ಉಗುರಿಗೆ ಸಮ, ಆಸ್ಕರ್ ಪ್ರಶಸ್ತಿ ಅವರ ಪಾದದ ಧೂಳಿಗೆ ಸಮ, ಯಾವ ಪ್ರಶಸ್ತಿಗಳನ್ನೂ ನಾನು ಗೌರವಿಸುವುದಿಲ್ಲ. ಎಲ್ಲವೂ ನನ್ನ ಪಾದಕ್ಕೆ ಸಮ ಎಂದು ಅತ್ಯಂತ ಹೀನಾಯವಾಗಿ ಮಾತನಾಡಿದ್ದಾರೆ.

ಸಂದರ್ಶನದ ಸಮಯದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್‌.ರೆಹಮಾನ್‌ ಅವರ ಕುರಿತಾಗಿ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ನಂದಮುರಿ ಬಾಲಕೃಷ್ಣ, , ನನಗೆ ಎ.ಆರ್.ರೆಹಮಾನ್ ಯಾರೆಂದು ಗೊತ್ತಿಲ್ಲ, ನಾನು ಕೇರ್ ಮಾಡುವುದಿಲ್ಲ. ದಶಕಗಳ ಹಿಂದೆ ಅವರು ಹಿಟ್ ಹಾಡುಗಳನ್ನು ನೀಡಿ ಆಸ್ಕರ್ ಅವಾರ್ಡ್ ಪಡೆದಿರಬಹುದು. ಆದರೆ ಅವೆಲ್ಲಾ ನನ್ನ ತಂದೆಯ ಪಾದದ ಧೂಳಿಗೆ ಸಮ. ಟಾಲಿವುಡ್‍ಗೆ ನಮ್ಮ ಕುಟುಂಬ ನೀಡಿದ ಕೊಡುಗೆಯನ್ನು ಯಾವುದೇ ಪ್ರಶಸ್ತಿ ಸರಿದೂಗಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]