Sunday, September 19 , 2021
ನೀರಜ್‌ ಚೋಪ್ರಾರ ಚಿನ್ನದ ಬೇಟೆ ಹಿಂದೆ ಇದ್ದಾರೆ ಓರ್ವ ಕನ್ನಡಿಗ!?

ಬೆಂಗಳೂರು (08.08.2021) : ಟೋಕಿಯೊ ಒಲಿಂಪಿಕ್‍ನ ಜಾವೆಲಿನ್‌ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ ನೀರಜ್ ಚೋಪ್ರಾ ಅವರ ಸಾಧನೆಗೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಬೆಂಗಳೆ ಗ್ರಾಮದ ಅಥ್ಲೆಟಿಕ್‌ ಕೋಚ್‌ ಕಾಶೀನಾಥ ನಾಯ್ಕ ಅವರ ಶ್ರಮ ಪ್ರಮುಖವಾಗಿದೆ.

ಭಾರತೀಯ ಸೈನ್ಯದಲ್ಲಿರುವ ನೀರಜ್ 2015 ರಿಂದ 2017ರ ಅವಧಿ ವರೆಗೆ ಪಟಿಯಾಲಾದಲ್ಲಿ ಜಾವೆಲಿನ್‌ ಎಸೆತದ ತರಬೇತಿ ಪಡೆದುಕೊಂಡಿದ್ದು ಕಾಶೀನಾಥ ಅವರಿಂದ. ಆಗ ಕಾಶೀನಾಥ ಭಾರತೀಯ ಅಥ್ಲೆಟಿಕ್ಸ್ ತಂಡದ ತರಬೇತುದಾರರಾಗಿದ್ದರು. ಈ ವೇಳೆ ಎರಡು ವರ್ಷಗಳ ಕಾಲ ನೀರಜ್‍ಗೆ ತರಬೇತಿ ನೀಡಿದ್ದ ಅವರು ಜಾವೆಲಿನ್‌ ಎಸೆತದ ಉತ್ಕೃಷ್ಟ ಕೌಶಲಗಳನ್ನು ಹೇಳಿಕೊಟ್ಟಿದ್ದರು.

ಒಲಿಂಪಿಕ್‍ಗೆ ತೆರಳುವ ಎರಡು ತಿಂಗಳು ಮುನ್ನ ಪುಣೆಗೆ ಬಂದಿದ್ದ ನೀರಜ್, ಉತ್ತಮವಾಗಿ ಜಾವೆಲಿನ್‌ ಎಸೆತದ ಬಗ್ಗೆ ಕೌಶಲಗಳನ್ನು ಕೇಳಿದ್ದರು. ಅದಕ್ಕೂ ಮುನ್ನ ಅವರು ಸ್ವೀಡನ್‍ನಲ್ಲಿ ತರಬೇತಿ ಪಡೆದು ಬಂದಿದ್ದರು. ಪ್ರತಿ ಹಂತದಲ್ಲೂ ಮತ್ತಷ್ಟು ದೂರ ಎಸೆಯುವ ಬಗ್ಗೆ ತಿಳಿ ಹೇಳಿದ್ದೆ ಎನ್ನುತ್ತಾರೆ ಕಾಶೀನಾಥ .

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]