Sunday, May 9 , 2021
ಡೇವಿಡ್ ವಾರ್ನರ್ ತಲೆದಂಡ: ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೆ ನೂತನ ನಾಯಕ

ನವದೆಹಲಿ (01.05.2021): ಅಂಕಪಟ್ಟಿಯಲ್ಲಿ ಕೊನೇ ಸ್ಥಾನಕ್ಕೆ ಕುಸಿದಿರುವ ಸನ್‌ರೈಸರ್ಸ್‌ ತಂಡ ಮತ್ತೇ ಪುಟುದೇಳುವ ಉದ್ದೇಶದಿಂದ ತಂಡದ ನಾಯಕತ್ವವನ್ನೇ ಬದಲಾಯಿಸಿದೆ.

ಸ್ಫೋಟಕ ಆಟವನ್ನೇ ಮರೆತಿರುವ ಡೇವಿಡ್ ವಾರ್ನರ್ ನಾಯಕತ್ವದಿಂದ ವಜಾಗೊಂಡಿದ್ದು, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ತಂಡದ ಹೊಸ ನಾಯಕರಾಗಿ ನೇಮಕಗೊಂಡಿದ್ದಾರೆ.

ಉಳಿದ 8 ಲೀಗ್ ಪಂದ್ಯಗಳಲ್ಲಿ ತಂಡವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸುವ ಹೊಣೆಯನ್ನು ವಿಲಿಯಮ್ಸನ್ ಹೊತ್ತುಕೊಂಡಿದ್ದಾರೆ. ರಾಜಸ್ಥಾನ ವಿರುದ್ಧದ ಪಂದ್ಯದಿಂದಲೇ ಕೇನ್ ನಾಯಕತ್ವ ನಿಭಾಯಿಸಲಿದ್ದಾರೆ ಎಂದು ಸನ್‌ರೈಸರ್ಸ್‌ ಫ್ರಾಂಚೈಸಿ ಮಾಹಿತಿ ನೀಡಿದೆ.

ತಂಡದ ವಿದೇಶಿ ಆಟಗಾರರ ಕಾಂಬಿನೇಷನ್ ಬದಲಾಯಿಸುವ ಸಲುವಾಗಿ ನಾಯಕತ್ವ ಬದಲಾವಣೆ ಮಾಡಲಾಗಿದೆ ಎಂದು ಸನ್‌ರೈಸರ್ಸ್‌ ತಿಳಿಸಿದೆ. ಇದರಿಂದ ವಾರ್ನರ್ ಆಡುವ 11ರ ಬಳಗದಿಂದಲೂ ಹೊರಬೀಳುವ ಸುಳಿವು ಬಿಟ್ಟುಕೊಟ್ಟಿದೆ. ಈ ಹಿಂದಿನ ಆವೃತ್ತಿಗಳಲ್ಲಿ ವಾರ್ನರ್ ಸಾರಥ್ಯದಲ್ಲೇ ತಂಡ ಉತ್ತಮ ಯಶಸ್ಸು ಕಂಡಿತ್ತು ಎಂಬುದನ್ನೂ ಫ್ರಾಂಚೈಸಿ ಒಪ್ಪಿಕೊಂಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]