Wednesday, June 23 , 2021
ಪಾಕಿಸ್ತಾನ: ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ: 30ಕ್ಕೂ ಹೆಚ್ಚು ಮಂದಿ ಸಾವು

ಇಸ್ಲಾಮಾಬಾದ್(07.06.2021): ಎರಡು ಪ್ರಯಾಣಿಕ ರೈಲುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಪಾಕಿಸ್ತಾನದ ದಕ್ಷಿಣ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 30 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ಉಮರ್ ತುಫೈಲ್ ಜಿಯೋ ತಿಳಿಸಿದ್ದಾರೆ.

ಅವಘಡ ಸಂಭವಿಸಿದ ಬಳಿಕ ರಕ್ಷಣಾ ಕಾರ್ಯಾಚರಣೆ ವಿಳಂಬವಾಗಿರುವುದರಿಂದ ಮತ್ತು ಬೋಗಿಗಳ ನಡುವೆ ಪ್ರಯಾಣಿಕರು ಸಿಲುಕಿರುವುದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಬೋಗಿಯೊಂದರಲ್ಲಿ 25 ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]