Monday, July 26 , 2021
ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ಪಂಕಜ್ ಸಿಂಗ್

ಜೈಪುರ (10.07.2021) : ಭಾರತ ತಂಡದ ಪರ ಪಂದ್ಯವಾಡಿದ್ದ ವೇಗಿ ಪಂಕಜ್ ಸಿಂಗ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.

36 ವರ್ಷದ ರಾಜಸ್ಥಾನದ ವೇಗಿ ಪಂಕಜ್ ಸಿಂಗ್ ರಾಜಸ್ಥಾನ ಕ್ರಿಕೆಟ್ ಮಂಡಳಿಗೆ ಪತ್ರ ಬರೆದು ತಮ್ಮ ವಿದಾಯದ ಬಗ್ಗೆ ಮಾಹಿತಿ ನೀಡಿದ್ದಾರೆ. 2010ರಲ್ಲಿ ಸುರೇಶ್ ರೈನಾ ನಾಯಕತ್ವದಲ್ಲಿ ಪಂಕಜ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು. ಶ್ರೀಲಂಕಾ ವಿರುದ್ಧ ಹರಾರೆಯಲ್ಲಿ ಏಕೈಕ ಏಕದಿನ ಪಂದ್ಯವಾಡಿದ್ದರು. 2014ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಡಿಯಲ್ಲಿ ಈ ಬಲಗೈ ವೇಗಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.

ಇಂಗ್ಲೆಂಡ್ ನ ಸೌತಂಪ್ಟನ್ ಮತ್ತು ಮ್ಯಾಂಚೆಸ್ಟರ್ ನಲ್ಲಿ ಟೆಸ್ಟ್ ಪಂದ್ಯವಾಡಿದ್ದ ಪಂಕಜ್ ಸಿಂಗ್, ಎರಡು ವಿಕೆಟ್ ಮಾತ್ರ ಪಡೆದಿದ್ದರು. ನಂತರ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಗಲಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]