Monday, March 8 , 2021
ಪೋಲಿಯೊ ಲಸಿಕೆ ಅಭಿಯಾನ ಜನವರಿ 31ಕ್ಕೆ ಮುಂದೂಡಿಕೆ

ಹೊಸದಿಲ್ಲಿ (15.01.2021)  :  ಜನವರಿ 16ರಂದು ರಾಷ್ಟ್ರಾದ್ಯಂತ ಕೋವಿಡ್ ಲಸಿಕೆ ಬಿಡುಗಡೆಯಾಗುತ್ತಿರುವ ಕಾರಣ ಪೋಲಿಯೊ ಲಸಿಕೆ ದಿನಾಂಕವನ್ನು ಜನವರಿ 31ಕ್ಕೆ ಮುಂದೂಡಲಾಗಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಪೋಲಿಯೊ ರಾಷ್ಟ್ರೀಯ ಲಸಿಕೆ ದಿನವನ್ನು ಈ ಹಿಂದೆ ಜನವರಿ 17ರಂದು ನಿಗದಿಪಡಿಸಲಾಗಿತ್ತು. ಆದರೆ, ಕೋವಿಡ್ ನಿರ್ವಹಣೆ, ಕೋವಿಡೇತರ ಅಗತ್ಯದ ಆರೋಗ್ಯ ಸೇವೆಗಳು ಪರಸ್ಪರ ಪ್ರತಿಕೂಲ ಪರಿಣಾಮ ಬೀರದಂತೆ ಮುಂದುವರಿಸಲು ಪೋಲಿಯೊ ಲಸಿಕೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕಲ್ಯಾಣ ಸಚಿವಾಲಯ ತಿಳಿಸಿದೆ.

ಜನವರಿ 31ರಂದು ಬೆಳಗ್ಗೆ 11.45ಕ್ಕೆ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಹನಿ ನೀಡುವ ಮೂಲಕ ರಾಷ್ಟ್ರಪತಿ ಅವರು ಪೋಲಿಯೊ ರಾಷ್ಟ್ರೀಯ ಲಸಿಕೆಯನ್ನು ಉದ್ಘಾಟಿಸಲಿದ್ದಾರೆ ಎಂದ ಸಚಿವಾಲಯ ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]