Monday, March 8 , 2021
ಗೋ ಮಾಂಸ ಸಂಬಂಧ ಸಿದ್ದರಾಮಯ್ಯರನ್ನೂ ಜೈಲಿಗೆ ಹಾಕುತ್ತೇವೆ: ಚವ್ಹಾಣ್ ಎಚ್ಚರಿಕೆ
Prabhu Chauhan

ಕೊಪ್ಪಳ (14.01.2021) :  ಗೋ ಮಾಂಸ ತಿನ್ನುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಹೇಳುತ್ತಿದ್ದಾರೆ. ಈ ರೀತಿ ಗೋ ಹತ್ಯೆಗೆ ಪ್ರಚೋದನೆ ನೀಡಿದರೆ ಅವರನ್ನೇ ಜೈಲಿಗೆ ಹಾಕ್ತೇವೆ ಎಂದು ಪಶು ಪಾಲನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಮಾಜಿ ಸಿಎಂಗೆ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿದ್ದೇವೆ. ಗೋವುಗಳನ್ನು ನಾವು ಮಾತೆ ಎಂದು ಪೂಜೆ ಮಾಡುತ್ತೇವೆ. ಅವುಗಳನ್ನು ಹತ್ಯೆ ಮಾಡಿ ತಿನ್ನುವುದು ಮಹಾ ಅಪರಾಧ. ಸಿದ್ದರಾಮಯ್ಯ ಅವರೂ ಗೋವುಗಳನ್ನು ಮಾತೆ ಎಂದು ಪೂಜೆ ಮಾಡ್ತಾರೆ. ಆದರೆ ಗೋ ಮಾಂಸ ತಿನ್ನುತ್ತೇವೆ ಎನ್ನುತ್ತಿರುವುದು ಎಷ್ಟರ ಮಟ್ಟಿಗೆ ಸರಿ ?  ಎಂದಿದ್ದಾರೆ.

ಮುಂದಿನ ದಿನದಲ್ಲಿ ಗೋವು ಹತ್ಯೆಗೆ ಪ್ರಚೋದನೆ ನೀಡುವವರ ಮೇಲೆ ಕ್ರಮ ಕೈಗೊಳ್ಳುವ ಕಾಯ್ದೆ ತರುವಂತೆ ಹೇಳಿದ್ದಾರೆ. ಅದರಂತೆ ಗೋಹತ್ಯೆ ಬಗ್ಗೆ ಪ್ರೋಚದನೆ ನೀಡಿದರೆ ನಾವು ಸಿದ್ದರಾಮಯ್ಯರನ್ನೂ ಜೈಲಿಗೆ ಹಾಕ್ತೇವೆ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]