Friday, December 4 , 2020
ಬಿಗ್​ ಬಾಸ್​ 8 ನೇ ಸೀಸನ್​ಗೆ ಸಿದ್ಧತೆ ಆರಂಭ…

ಡೆಸ್ಕ್​ (19.11.2020) : ಈಗಾಗಲೇ ಕಿರುತೆರೆ ವೀಕ್ಷಕರ ಮನ ಸೆಳೆದಿರುವ ಬಿಗ್​​​​​​​ಬಾಸ್ ಇತರ ಭಾಷೆಗಳಲ್ಲಿಯೂ ಪ್ರಸಾರವಾಗುತ್ತಿದೆ. ಆದರೆ , ಕೊರೊನಾ ಭೀತಿ ಹಿನ್ನೆಲೆ ಕನ್ನಡದಲ್ಲಿ ಇನ್ನೂ ಆರಂಭವಾಗಿಲ್ಲ. ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ಮುಂದಿನ ಸೀಸನ್​ಗೆ ತಯಾರಿ ನಡೆಯುತ್ತಿದೆ.

2021 ಆರಂಭದಲ್ಲಿ ಕಾರ್ಯಕ್ರಮ ಆರಂಭವಾಗಲಿದೆಯಂತೆ. ಬೆಂಗಳೂರಿನ ಬಿಡದಿಯಲ್ಲಿರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಬಿಗ್​​​ಬಾಸ್​​​​​​​​​​​​ ಮನೆಯ ರಿಪೇರಿ ಕಾರ್ಯ ಶುರುವಾಗಿದೆ. ಬಿಗ್​​​​​​​​​​​​​​​​​​​​​ಬಾಸ್ ಶೋ ನಡೆಸುವುದಕ್ಕೆ ಬೇಕಾದ ರೀತಿಯಲ್ಲಿ ಮನೆಯನ್ನು ತಯಾರು ಮಾಡುವಲ್ಲಿ ಒಂದು ತಂಡ ಕೆಲಸ ಆರಂಭಿಸಿದೆ.

ಈ ಬಾರಿಯ ಸ್ಪರ್ಧಿಗಳ ಮನ ಸೆಳೆಯಲು ವಿಶೇಷ ರೀತಿಯಲ್ಲಿ ಮನೆಯನ್ನು ತಯಾರು ಮಾಡಲು ನಿರ್ಧರಿಸಲಾಗಿದೆಯಂತೆ. ಮನೆಯ ಕೆಲಸಗಳು ಪೂರ್ಣಗೊಳ್ಳಲು ಒಂದು ತಿಂಗಳಾದರೂ ಸಮಯ ಬೇಕು ಎಂದು ಬಿಗ್​​ಬಾಸ್ ಆಯೋಜಕರು ಮಾಹಿತಿ ನೀಡಿದ್ದಾರೆ.

ಮನೆ ಕಾರ್ಯ ಪೂರ್ಣಗೊಂಡ ನಂತರ ಅಧಿಕೃತವಾಗಿ ಶೋ ಯಾವಾಗ ಆರಂಭವಾಗಲಿದೆ ಎಂಬ ವಿಚಾರವನ್ನು ತಿಳಿಸಲಾಗುತ್ತದೆ. ಇದರ ಜೊತೆಗೆ ದೊಡ್ಮನೆಯೊಳಗೆ ಕಾಲಿಡುವ ಸ್ಪರ್ಧಿಗಳಿಗಾಗಿ ಹುಡುಕಾಟವೂ ಶುರುವಾಗಿದೆ. ಒಟ್ಟಿನಲ್ಲಿ ಕನ್ನಡ ಕಿರುತೆರೆಯಲ್ಲಿ ಯಶಸ್ವಿ 7 ಸೀಸನ್​​​​​​​​​​ಗಳನ್ನು ಪೂರೈಸಿರುವ ಬಿಗ್​​​​​​​​​​​​​​​​​ಬಾಸ್ 8 ನೇ ಸೀಸನ್ ನೋಡಲು ಕಿರುತೆರೆಪ್ರಿಯರು ಕೂಡಾ ಕಾತರದಿಂದ ಕಾಯುತ್ತಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]