Sunday, May 9 , 2021
ಶೀಘ್ರದಲ್ಲಿಯೇ ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಸಂಬಂಧ ಸಂಪುಟದ ವರದಿ ಸಲ್ಲಿಕೆ: ಸಚಿವ ಈಶ್ವರಪ್ಪ

ಶಿವಮೊಗ್ಗ (15.04.2021) : ಮೀಸಲಾತಿ ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರಕ್ಕೆ ಶೀಘ್ರವೇ ವರದಿ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಿಹಿ ಸುದ್ದಿ ನೀಡಿದ್ದಾರೆ.

ಪಂಚಮಸಾಲಿ, ವೀರಶೈವ ಲಿಂಗಾಯಿತ, ಕುರುಬ ಸಮುದಾಯ ಸೇರಿದಂತೆ ಮೀಸಲಾತಿಗೆ ಆಗ್ರಹಿಸಿ ಹೋರಾಟ, ಪಾದಯಾತ್ರೆ ನಡೆದಿದ್ದವು. ಈ ಸಂಬಂಧ ಮೀಸಲಾತಿ ಸಂಬಂಧ ಸುಪ್ರೀಂ ಕೋರ್ಟ್ ಗೆ ಮಹತ್ವದ ಅಫಿಡವಿಟ್ ಸಲ್ಲಿಸಿರುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೂಡ ತಿಳಿಸಿದ್ದರು. ಇದೀಗ ಶಿವಮೊಗ್ಗದಲ್ಲಿ ನಡೆದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಈಶ್ವರಪ್ಪ, ಈ ಬಗ್ಗೆ ಮಾತನಾಡಿ ಮೀಸಲಾತಿ ಕುರಿತು ಸಂಪುಟದಲ್ಲಿ ಕೈಗೊಳ್ಳಲಾದ ನಿರ್ಧಾರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ

ಮೀಸಲಾತಿ ವಿಚಾರವಾಗಿ ಎಲ್ಲಾ ರಾಜ್ಯಗಳು ಅಭಿಪ್ರಾಯ ನೀಡುವಂತೆ ಸುಪ್ರೀಂ ಕೋರ್ಟ್ ಕೇಳಿತ್ತು. ಈ ಹಿನ್ನೆಲೆ ಸಚಿವ ಸಂಪುಟ ಸಭೆಯಲ್ಲಿ ಕೆಲ ಮಹತ್ವದ ಚರ್ಚೆ ನಡೆದಿದೆ., ಮೀಸಲಾತಿ ಪಡೆದವರೇ ಹೆಚ್ಚು ಹೆಚ್ಚು ಅನುಕೂಲಗಳನ್ನು ಪಡೆಯುತ್ತಿದ್ದಾರೆ ಶಾಸಕರು, ಸಚಿವರು, ಎಂಪಿಗಳು ಮಾತ್ರವಲ್ಲ ಅಧಿಕಾರಿ ಹುದ್ದೆಗಳಲ್ಲಿ ಕೂಡ ಅವರದೇ ಕುಟುಂಬದವರು ಆ ಹುದ್ದೆಗಳನ್ನು ಅಲಂಕರಿಸುವ ಸ್ಥಿತಿ ನಿರ್ಮಾಣವಾಗಿದೆ. ಸಮಾಜದಲ್ಲಿ ಈ ತಾರತಮ್ಯಗಳನ್ನು ಹೋಗಲಾಡಿಸಿ ನಿಜವಾದ ಅರ್ಹರಿಗೆ ಮೀಸಲಾತಿ ಸಿಗುವಂತೆ ಮಾಡಬೇಕಿದೆ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]