
ಬೆಂಗಳೂರು (21.01.2021) : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿಗೆ ಸುಪ್ರೀಂ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದೆ.
140 ದಿನಗಳಿಂದ ಜೈಲಿನಲ್ಲಿದ್ದ ನಟಿ ರಾಗಿಣಿ ಈಗ ಹೊರಬರುತ್ತಿದ್ದಾರೆ. ನಟಿ ರಾಗಿಣಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು.
ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿಯನ್ನು ಈ ಮೊಲದೇ ಹಲವಾರು ಸಲ್ಲಿಸಿದರಾದರೂ ಕೋರ್ಟ್ ಅರ್ಜಿ ತಿರಸ್ಕರಿಸಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದಕೋರ್ಟ್, ಕೊನೆಗೂ ಜಾಮೀನು ಮಂಜೂರು ಮಾಡಿದೆ.