Monday, July 26 , 2021
ಏಕಾಂಗಿಯಾಗಿ ದೆಹಲಿಗೆ ಹೊರಟ ರೇಣುಕಾಚಾರ್ಯ : ಕಾರಣ?

ಬೆಂಗಳೂರು(21.07.2021) : ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತಷ್ಟು ಬಲ ಪಡೆಯುತ್ತಿದ್ದಂತೆ, ಸಿಎಂ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ದೆಹಲಿಗೆ ದೌಡಾಯಿಸಿದ್ದಾರೆ.

ಸಿಎಂ ಬಿಎಸ್ ವೈ ಪರ ಇರುವ ಕೆಲ ಆಪ್ತ ಶಾಸಕರೊಂದಿಗೆ ದೆಹಲಿಗೆ ತೆರಳಿ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ ಎಂದು ವಾರಗಳ ಹಿಂದೆ ರೇಣುಕಾಚಾರ್ಯ ಹೇಳಿದ್ದರು. ಇದಕ್ಕೆ ಸ್ವತಃ ಸಿಎಂ ಅವರೇ ಬೇಡ ಎಂದಿದ್ದರು ಎನ್ನಲಾಗಿದೆ. ಹೀಗಾಗಿ ಶಾಸಕರ ತಂಡದ ಜೊತೆಗೆ ದೆಹಲಿಗೆ ತೆರಳುವ ಯೋಜನೆಯನ್ನು ಕೈಬಿಟ್ಟಿದ್ದರು. ಆದರೆ ಇದೀಗ ಒಬ್ಬರೇ ದೆಹಲಿಗೆ ತೆರಳಿದ್ದಾರೆ.

ಬಿಎಸ್ ವೈ ಮುಖ್ಯಮಂತ್ರಿ ಸ್ಥಾನದಿಂದ ಕೆಳಕ್ಕಿಳಿಯುವುದು ಬಹುತೇಕ ಖಚಿತ ಎನ್ನುವಂತಹ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ಎರಡು ವರ್ಷ ಬಿಎಸ್ ವೈ ಅವರನ್ನೇ ಮುಂದುವರಿಸುವಂತೆ ಕಮಲ ನಾಯಕರ ಬಳಿ ಕೇಳಿಕೊಂಡು ಕೊನೆಯ ಪ್ರಯತ್ನ ಮಾಡಲು ಹೊನ್ನಾಳಿ ಶಾಸಕ ದೆಹಲಿ ಕಡೆ ಮುಖ ಮಾಡಿದ್ದಾರೆ ಎಂದು ತಿಳಿದುಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]