Saturday, October 17 , 2020
ಎಸ್ಸಿ,ಎಸ್ಟಿ ಪ್ರಕರಣಗಳ ವಿಲೇವಾರಿಯಲ್ಲಿ ವಿಳಂಬ| ಹೈಕೋರ್ಟ್ ನಿಂದ ಖಡಕ್ ನಿರ್ದೇಶನ
high cour

ಬೆಂಗಳೂರು(18-09-2020): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (ದೌರ್ಜನ್ಯ ತಡೆ) ಕಾಯ್ದೆ 1989 ರ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ಪರಿಣಾಮಕಾರಿ ಕ್ರಮಕ್ಕೆ ಮತ್ತು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಸೇರಿದಂತೆ ಹೈಕೋರ್ಟ್ ರಿಜಿಸ್ಟರ್ ಜರ್ನಲ್ ಗೆ ಅನೇಕ ನಿರ್ದೇಶನಗಳನ್ನು ಕರ್ನಾಟಕ ಹೈಕೋರ್ಟ್ ನೀಡಿದೆ.

ಕರ್ನಾಟಕದ ಎಸ್‌ಸಿ ಮತ್ತು ಎಸ್‌ಟಿಗಳ ಮೇಲ್ವಿಚಾರಣೆ ಮತ್ತು ಅಭಿವೃದ್ಧಿ ಸಮಿತಿ ಸಲ್ಲಿಸಿದ ಪಿಐಎಲ್‌ಗೆ ರಾಜ್ಯದ ಪ್ರತಿಕ್ರಿಯೆಯನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿನಗಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ನಿರ್ದೇಶನಗಳನ್ನು ನೀಡಿದೆ.

ನಿಯಮ 7 (2) ರ ಪ್ರಕಾರ ಚಾರ್ಜ್‌ಶೀಟ್ 60 ದಿನಗಳಲ್ಲಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ಹೇಳಿದರು. ಆದರೆ 2015 ರ ಕೊನೆಯಲ್ಲಿ 35,091 ಪ್ರಕರಣಗಳಲ್ಲಿ ಕೇವಲ 6,451 ಪ್ರಕರಣಗಳಲ್ಲಿ ಚಾರ್ಜ್‌ಶೀಟ್ ದಾಖಲಿಸಲಾಗಿದೆ. ತನಿಖೆಯ ವಿಳಂಬಕ್ಕೆ ತನಿಖಾ ಅಧಿಕಾರಿ ವಿವರಣೆಯನ್ನು ಸಲ್ಲಿಸಿದ್ದಾರೆಯೇ ಎಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ನ್ಯಾಯಪೀಠ ಹೇಳಿದೆ.



ಹೆಚ್ಚಿನ ಸಂಖ್ಯೆಯಲ್ಲಿ ಬಾಕಿ ಇರುವ ಪ್ರಕರಣಗಳು ವಿಚಾರಣೆ ನಡೆಸಲು ಇನ್ನೂ ಒಂಬತ್ತು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಮತ್ತು ಜಿಲ್ಲಾ ನ್ಯಾಯಾಧೀಶರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್ (ಆರ್‌ಜಿ) ಗೆ ನಿರ್ದೇಶನ ನೀಡಿದೆ.
ಈ ಕುರಿತು ಎಲ್ಲಾ ವಿಶೇಷ ನ್ಯಾಯಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ನ್ಯಾಯಪೀಠ ರಿಜಿಸ್ಟರ್ ಗೆ ನಿರ್ದೇಶಿಸಿದ್ದು, ದಲಿತ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದ ಪ್ರಕರಣದ ಕುರಿತು ನಿಗದಿ ಪಡಿಸಿದ ಸಮಯದ ಬಗ್ಗೆ ಗಮನಸೆಳೆಯಬೇಕು ಎಂದು ಹೇಳಿದ್ದಾರೆ.

ಪ್ರಕರಣಗಳ ತನಿಖೆಯಲ್ಲಿನ ವಿಳಂಬ ಮತ್ತು ಹೆಚ್ಚಿನ ಸಂಖ್ಯೆಯ ಖುಲಾಸೆಗಳನ್ನು ಪರಿಹರಿಸಲು ಸರ್ಕಾರ ತನಿಖಾ ಅಧಿಕಾರಿಗಳಿಗೆ ಮತ್ತು ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ತರಬೇತಿ ನೀಡಬೇಕು. ತರಬೇತಿಗಾಗಿ ಸರ್ಕಾರ ಕರ್ನಾಟಕ ನ್ಯಾಯಾಂಗ ಅಕಾಡೆಮಿಯನ್ನು ಸಂಪರ್ಕಿಸಬಹುದು ಎಂದು ಅದು ಹೇಳಿದೆ. ಸಂತ್ರಸ್ತರಿಗೆ ನೀಡಲಾಗುವ ಪರಿಹಾರದ ವಿವರಗಳನ್ನು ಸರ್ಕಾರ ಒದಗಿಸಬೇಕು ಎಂದು ಹೈಕೋರ್ಟ್ ಹೇಳಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]