Sunday, September 19 , 2021
ಶೂಟರ್ ನಮನ್‌ವೀರ್ ಸಿಂಗ್ ಬ್ರಾರ್ ನಿಗೂಢ ಸಾವು

ಚಂಡೀಗಢ(14.09.2021): ಶೂಟರ್ ನಮನ್‌ವೀರ್ ಸಿಂಗ್ ಬ್ರಾರ್ ಅವರು ತಮ್ಮ ಮನೆಯಲ್ಲೇ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮೊಹಾಲಿಯಲ್ಲಿ ನಡೆದಿದೆ.

ಇವರು ಹಲವು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ಸೋಮವಾರ ಮೊಹಾಲಿಯಲ್ಲಿರುವ ಅವರ ಮನೆಯಲ್ಲಿ ನಮನ್ ವೀರ್ ಸಿಂಗ್ ಮೃತದೇಹ ಕಂಡು ಬಂದಿದ್ದು, ದೇಹದಲ್ಲಿ ಗುಂಡು ತಾಗಿದ ಗಾಯ ಕಂಡು ಬಂದಿದೆ ಎಂದು ಮೊಹಾಲಿಯ ಉಪ ಪೊಲೀಸ್ ಆಯುಕ್ತ ಗುರುಶೇರ್‌ ಸಿಂಗ್ ಸಂಧು ತಿಳಿಸಿದ್ದಾರೆ.

ನಮನ್‌ವೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಆಕಸ್ಮಿಕವಾಗಿ ಗುಂಡು ತಾಗಿ ಸಾವಿಗೀಡಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಮೇಲೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಸಂಧು ತಿಳಿಸಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ ನವದೆಹಲಿಯಲ್ಲಿ ನಡೆದಿದ್ದ ಐಎಸ್‌ಎಸ್‌ಎಫ್‌ ವಿಶ್ವಕಪ್‌ ಟೂರ್ನಿಯಲ್ಲಿ ಕನಿಷ್ಠ ಅರ್ಹತಾ ಸ್ಕೋರ್‌ ವಿಭಾಗದಲ್ಲಿ ಸ್ಪರ್ಧಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]