Friday, October 16 , 2020
ಶಾಕಿಂಗ್ ನ್ಯೂಸ್ | ನೇಣು ಬಿಗಿದು ಖ್ಯಾತ ನಟಿ ಆತ್ಮಹತ್ಯೆ
suicide

ಹೈದರಾಬಾದ್(09.09.2020):  ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಅವರು ತಮ್ಮ ಹೈದರಾಬಾದ್ ಎಸ್.ಆರ್.ನವರದ ಮಧುರಾ ನಗರದಲ್ಲಿರುವ ನಿವಾದಲ್ಲಿ ಆತ್ಮಹತ್ತೆ ಮಾಡಿಕೊಂಡಿದ್ದಾರೆ. ಇವರು ತೆಲುಗು ಕಿರುತೆರೆಯ ಪ್ರಮುಖ ನಟಿಯಾಗಿದ್ದರು.

‘ಮೌನರಾಗಂ’, ‘ಮನಸು ಮಮತ’ ಧಾರಾವಾಹಿಗಳ ಮೂಲಕ ಜನರ ಮನಸ್ಸಿನಲ್ಲಿ ನೆಲೆಯಾಗಿದ್ದ ಶ್ರಾವಣಿ ಅವರು,  ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಆಂಧ್ರಪ್ರದೇಶದ ಕಾಕಿನಾಡ ಮೂಲದ ಶ್ರಾವಣಿ ಹೈದರಾಬಾದ್ ನಲ್ಲಿ ನೆಲೆಸಿದ್ದರು. ಇವರನ್ನು ದೇವರಾಜ ರೆಡ್ಡಿ ಎಂಬಾತ ಪ್ರೀತಿಸುವ ನಾಟಕವಾಡಿ, ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ. ಹಣಕ್ಕಾಗಿ ಈತ ಈ ಕೃತ್ಯ ನಡೆಸುತ್ತಿದ್ದ. ಈ ಬಗ್ಗೆ ನಟಿ ಈ ಹಿಂದೆ ದೂರು ಕೂಡ ನೀಡಿದ್ದರು.

ಈತನ ಕಿರುಕುಳ ಹೆಚ್ಚಾದ ಕಾರಣದಿಂದಲೇ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ನಟಿಯ ಮನೆಯವರು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದಿವರೆಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]