
ಬೆಂಗಳೂರು (22.02.2021) : ಸುಳ್ಳಿಗೆ ಪರ್ಯಾದ ಪದವೆಂದರೆ ಅದು ಮೋದಿ. ಅವರ ಚುನಾವಣಾ ಪೂರ್ವದ ಭಾಷಣ ಹಾಗೂ ಇಂದಿನ ಆಡಳಿತ ಒಂದಕ್ಕೊಂದು ತದ್ವಿರುದ್ಧವಾಗಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ @BSYBJP ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ ಅಧಿಕಾರ ನಡೆಸಿ ತೋರಿಸುತ್ತೇವೆ. 3/3#BJPFailsIndia
— Siddaramaiah (@siddaramaiah) February 21, 2021
ಸರಣಿ ಟ್ವೀಟ್ ಮಾಡಿರುವ ಅವರು, ಮೋದಿ, ಮೋದಿ ಅಂತ ಘೋಷಣೆ ಕೂಗುತ್ತಾ, ಅಧಿಕಾರ ಕೊಟ್ಟ ಜನರೇ ಇಂದು ಮೋಸಹೋಗಿದ್ದಾರೆ. ಮೋದಿಯವರ ನಿಜ ಬಣ್ಣವನ್ನು ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ ಎಂದಿದ್ದಾರೆ.
ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಇನ್ನು ಮುಖ್ಯಮಂತ್ರಿ ಬಿಎಸ್ವೈ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದ್ದೀರಾ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ ಅಧಿಕಾರ ನಡೆಸಿ ತೋರಿಸುತ್ತೇವೆ ಎಂದು ಸವಾಲ್ ಹಾಕಿದ್ದಾರೆ.