Sunday, May 9 , 2021
ರಾಜ್ಯದಲ್ಲಿ ಎಸ್​ಎಸ್​ಎಲ್​​ಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ : ಸುರೇಶ್ ಕುಮಾರ್

ಚಾಮರಾಜನಗರ (16.04.2021) : ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಮುಖ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ರಾಜ್ಯದಲ್ಲಿ ಪರೀಕ್ಷೆಗೆ ಇನ್ನೂ 2 ತಿಂಗಳು ಇದೆ. ಹೀಗಾಗಿ ಪರೀಕ್ಷೆ ರದ್ದು ಬಗ್ಗೆ ತೀರ್ಮಾನ ಮಾಡುವುದು ಈಗ ಬೇಡ. ಎಸ್‌ಎಸ್‌ಎಲ್​​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ಶೀಘ್ರದಲ್ಲೇ ತಿಳಿಸಲಾಗುವುದು ಎಂದಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ರಾಜ್ಯದಲ್ಲೂ ಎಸ್‌ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಶೀಘ್ರವೇ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]