Wednesday, June 23 , 2021
ನನ್ನ ರಕ್ತ ಕುದಿಯುತ್ತಿದೆ: ಜೆಡಿಎಸ್​ ಶಾಸಕರ ವಿರುದ್ಧ ಸುಮಲತಾ ಕಿಡಿ

ಮಂಡ್ಯ (08.05.2021) : ಈ ಸಮಯದಲ್ಲಿ ಪ್ರತಿಯೊಂದಕ್ಕೂ ರಾಜಕಾರಣ ಮಾಡಿದ್ರೆ ನನ್ನ ರಕ್ತ ಕುದಿಯುತ್ತದೆ ಎಂದ ಸಂಸದೆ ಸುಮಲತಾ ಅಂಬರೀಷ್​ ಬೇಸರ ಹೊರಹಾಕಿದ್ದಾರೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಮಾತನಾಡಿದ ಸುಮಲತಾ, ನನಗೆ ಮಾತನಾಡಲು ಅವಕಾಶವನ್ನೇ ನೀಡುತ್ತಿಲ್ಲ ಎಂದು ಸಭೆಯ ಅರ್ಧದಲ್ಲೇ ಎದ್ದು ಹೊರನಡೆದರು. ಅಲ್ಲದೆ ಜಾ.ದಳ ಶಾಸಕರ ವಿರುದ್ಧ ತೀವ್ರ ಕಿಡಿಕಾರಿದ್ದಾರೆ.

ಎಷ್ಟೋ ಚುನಾವಣೆಗಳನ್ನು ಗೆದ್ದು ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಸಲಹೆ ಕೊಡುವುದನ್ನು ಬಿಟ್ಟು ಕಿರುಚಾಡಿಕೊಂಡು ಎಂಜಾಯ್ ಮಾಡುತ್ತಿದ್ದಾರೆ. ಇಲ್ಲೇನು ಡ್ರಾಮ ನಡೆಯುತ್ತಿದೆಯೇ?ಎಂದು ಸುಮಲತಾ ಪ್ರಶ್ನಿಸಿದರು.

ರಾಜಕಾರಣ ಇಷ್ಟವಿಲ್ಲ, ಇಂತಹ ರಾಜಕಾರಣ ಬೇಕಿಲ್ಲ. ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಲು ನನ್ನ ಕೈಲಾದಷ್ಟು ಮಟ್ಟಿಗೆ ಪ್ರಯತ್ನಿಸುತ್ತಿದ್ದೇನೆ. ಬೇರೆಯವರ ರೀತಿ ಸಭೆ, ಸಮಾರಂಭಗಳಿಗೆ ಹೋಗಿ ಫೋಟೋಗೆ ಫೋಸ್ ಕೊಡಲ್ಲ, ಕೆಲಸ ಮಾಡುತ್ತೇನೆ, ಕೆಲಸ ಮಾಡಲು ಮಾನವೀಯತೆ ಬೇಕು ಎಂದಿದ್ದಾರೆ.

ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲು ತಜ್ಞರಿದ್ದಾರೆ. ಕೋವಿಡ್ ಸಂಬಂಧವಾಗಿ ವಾರದಲ್ಲಿ ಎರಡು ಬಾರಿ ಆರೋಗ್ಯ ಸಚಿವರೊಂದಿಗೆ ಮಾತನಾಡುತ್ತಿದ್ದೇನೆ. ಆಕ್ಸಿಜನ್ ಘಟಕ ಸ್ಥಾಪಿಸುವ ಸಂಬಂಧ ಉದ್ಯಮಿಗಳ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಮಾತನಾಡದೆ ಏನೇನೋ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]