Friday, December 4 , 2020
ಸುವರ್ಣ ತ್ರಿಭುಜ ಬೋಟ್​ ಮುಳುಗಡೆ ಪ್ರಕರಣ: ಮೀನುಗಾರರ ಕುಟುಂಬಗಳಿಗೆ ಪರಿಹಾರದ ಚೆಕ್​ ವಿತರಣೆ

ಉಡುಪಿ (21.11.2020): ಸಿಎಂ ಬಿ.ಎಸ್​. ಯಡಿಯೂರಪ್ಪ ಅವರು ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಸುವರ್ಣ ತ್ರಿಭುಜ ಬೋಟ್​ನಲ್ಲಿದ್ದ ಏಳು ಮಂದಿ ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್​​ನನ್ನು ನೀಡಿದರು.

ಶನಿವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ವೇಳೆ ಪರಿಹಾರದ ಚೆಕ್​ನನ್ನು ಹಸ್ತಾಂತರಿಸಿದರು.
2018ರ ಡಿಸೆಂಬರ್‌ನಲ್ಲಿ ಮಲ್ಪೆಯಿಂದ ಏಳು ಜನರಿದ್ದ ಬೋಟ್‌ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿತ್ತು.

ಬಳಿಕ ಉನ್ನತ ಮಟ್ಟದ ಶೋಧ ನಡೆಸಿ, ಬೋಟ್​ ಮುಳುಗಡೆಯಾಗಿದೆ ಎಂದು ವರದಿ ನೀಡಲಾಗಿತ್ತು. ಈ ಹಿನ್ನೆಲೆ ಮೀನುಗಾರರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ನೀಡುವಂತೆ ಶಾಸಕ ಕೆ. ರಘುಪತಿ ಭಟ್‌ ಅವರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಸಿಎಂ ಇಂದು ಮೀನುಗಾರರ ಕುಟುಂಬಕ್ಕೆ ಪರಿಹಾರ ಚೆಕ್ ನೀಡಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]