Sunday, September 19 , 2021
ಮಂಗಳೂರಿನಿಂದ ಉಡುಪಿಗೆ ಆಸ್ಕರ್​ ಫರ್ನಾಂಡಿಸ್​ ಪಾರ್ಥಿವ ಶರೀರ

ಮಂಗಳೂರು(14.09.2021): ಸೋಮವಾರ ನಿಧನರಾಗಿರುವ ಮಾಜಿ ಕೇಂದ್ರ ಸಚಿವ ಆಸ್ಕರ್​ ಫರ್ನಾಂಡಿಸ್​ ಅವರ ಪಾರ್ಥಿವ ಶರೀರವನ್ನು ಉಡುಪಿಗೆ ಆ್ಯಂಬುಲೆನ್ಸ್ ಮೂಲಕ ತರಲಾಗುತ್ತಿದೆ.

ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ತರಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ, ಮಗ, ಮಗಳು ಸೇರಿ ಕುಟುಂಬಸ್ಥರು ಭಾಗಿಯಾಗಿದ್ದರು.

11 ಗಂಟೆ ಸುಮಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕ ದರ್ಶನ ಇಡಲಾಗುತ್ತದೆ. 3 ಗಂಟೆ ವೇಳೆ ಮತ್ತೆ ಮಂಗಳೂರಿನ ಕಾಂಗ್ರೆಸ್ ಕಚೇರಿಗೆ ಕೊಂಡೊಯ್ಯಲಾಗುತ್ತದೆ. ಮಲ್ಲಿಕಟ್ಟೆ ಬಳಿಯ ಕಾಂಗ್ರೆಸ್ ಕಚೇರಿಯಲ್ಲಿ 3 ರಿಂದ 5 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]