Friday, March 5 , 2021
ರೈತ ಸಮುದಾಯಕ್ಕೆ ಈ ಸಾಲಿನ ಬಜೆಟ್​ನಲ್ಲಿ ಸಿಕ್ಕಿದೆ ಭರ್ಜರಿ ಸಿಹಿಸುದ್ದಿ

ನವದೆಹಲಿ (02.01.2021) : ಈ ಸಾಲಿನ ಬಜೆಟ್​ನಲ್ಲಿ ರೈತರಿಗೆ ಕೇಂದ್ರದಿಂಧ ಶುಭಸುದ್ದಿ ನೀಡಲಾಗಿದೆ.

ರೈತರ ಆದಾಯ ಐದು ಪಟ್ಟು ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬದ್ಧ, ಕೃಷಿ ವಲಯ ಚೇತರಿಕಗೆ ಕೇಂದ್ರದಿಂದ ಹೊಸ ಯೋಜನೆ. ಪ್ರಸಕ್ತ ವರ್ಷ ಗೋಧಿ ಖರೀದಿಗೆ 75 ಸಾವಿರ ಕೋಟಿ ರೂ. ವ್ಯಯ. 40 ಲಕ್ಷ ರೈತರಿಗೆ ಇದರ ಲಾಭ ಸಿಕ್ಕಿದೆ. 1.ಲಕ್ಷ 72 ಸಾವಿರ ಕೋಟಿ ರೂ. ಮೊತ್ತದಲ್ಲಿ ಭತ್ತ ಖರೀದಿಗೆ ಕ್ರಮ ಕೈಗೊಳ್ಳಲಾಗುತ್ತದೆ.

ಪಶುಪಾಲನೆ, ಹೈನುಗಾರಿಕೆ ಕುಕ್ಕುಟೋದ್ಯಮಕ್ಕೆ ಅನುದಾನ ಹೆಚ್ಚಳ . 30 ಸಾವಿರ ಕೋಟಿ ರೂ. ಇದ್ದ ಅನುದಾನ 40 ಸಾವಿರ ಕೋಟಿಗೆ ಹೆಚ್ಚಳ ರೈತರ ಸಾಲ ಯೋಜನೆಗೆ 16.5 ಲಕ್ಷ ಕೋಟಿ ರೂ.ನಿಗದಿ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಬ್ಯಾಂಕ್ ಠೇವಣಿದಾರ ವಿಮೆಗೆ ಹಣದ ಮೊತ್ತ ಏರಿಕೆ 1 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ. 6 ವರ್ಷಗಳಲ್ಲಿ ವಿದ್ಯುತ್ ಹಲವು ಸುಧಾರಣೆಗಳನ್ನು ತರಲಾಗಿದೆ. 2.8 ಕೋಟಿ ಮನೆಗಳಲ್ಲಿ 6 ವರ್ಷದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಗ್ರಾಹಕರು ಯಾರಿಂದ ಬೇಕಾದರೂ ವಿದ್ಯುತ್ ಖರೀದಿಸಬಹುದು.

ಇನ್ನು ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 1.18 ಲಕ್ಷ ಕೋಟಿ ರೂ. ಅನುದಾನ, ತಮಿಳುನಾಡಿನಲ್ಲಿ 3,500 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಕೇರಳದಲ್ಲಿ 1,100 ಕಿ.ಮೀ , 55 ಸಾವಿರ ಕೋಟಿ ರೂ. ನೀಡಿಕೆ. ಪಶ್ಚಿಮ ಬಂಗಾಳ್ಲಿ 675 ಕಿ.ಮೀ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ 25 ಸಾವಿರ ಕೋಟಿ ರೂ.ನೀಡಲಾಗುವುದು ಎಂದು ಸೀತಾರಾಮನ್​ ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]