Sunday, September 19 , 2021
ಬ್ರೇಕಿಂಗ್ ನ್ಯೂಸ್| SSLC ಪರೀಕ್ಷೆಗೆ ತಡೆಯಾಜ್ಞೆಗೆ ಇಲ್ಲ

ಬೆಂಗಳೂರು ( 12-07-2021): 2021 ನೇ ಸಾಲಿನ SSLC ಪರೀಕ್ಷೆ ರದ್ದುಗೊಳಿಸುವಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

SSLC ಪರೀಕ್ಷೆಯನ್ನು ರದ್ದುಗೊಳಿಸುವಂತೆ ಎಸ್.ವಿ ಸಿಂಗ್ರೇಗೌಡ ಎಂಬುವವರು ಹೈಕೋರ್ಟ್ ನಲ್ಲಿ  ಅರ್ಜಿ ಸಲ್ಲಿಸಿದ್ದರು. ದೇಶದಲ್ಲಿ COVID-19 ನಿಂದಾಗಿ  ಬಿಕ್ಕಟ್ಟಿನ ಸಂದರ್ಭ ಏರ್ಪಟ್ಟಿದ್ದು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಪರಗಣಿಸಬೇಕು, ಯಾವುದೇ ಭೌತಿಕ ತರಗತಿಗಳು ನಡೆದಿರುವುದಿಲ್ಲ,  ತರಗತಿಗಳನ್ನು ಆನ್‌ಲೈನ್ ಮೂಲಕ ನಡೆಸಲಾಗುತ್ತಿರುವುದರಿಂದ, ವಿದ್ಯಾರ್ಥಿಗಳಿಗೆ ಪಠ್ಯ ವಿಷಯಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಹಾಗೆಯೇ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳನ್ನು ನಡೆಸಲು ಯಾವುದೇ ಸೌಲಭ್ಯವಿಲ್ಲ. ಹಾಗಾಗಿ ಪರೀಕ್ಷೆ ರದ್ದುಗೊಳಿಸಬೇಕೆಂದು ಮನವಿ ಮಾಡಿದ್ದರು.

ನ್ಯಾಯಮೂರ್ತಿ ಬಿ.ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಹೆಚ್.ಸಂಜೀವ್ ಕುಮಾರ್ ಅವರ ನ್ಯಾಯಪೀಠ ಅರ್ಜಿಯನ್ನು ಆಲಿಸಿ,  ರಾಜ್ಯ ಸರ್ಕಾರದ ಈ ಅಧಿಸೂಚನೆಯನ್ನು ಬೆಂಬಲಿಸಿತು ಮತ್ತು “ವಿದ್ಯಾರ್ಥಿಗಳಿಗೆ  ಪರೀಕ್ಷೆಗೆ ಅಧ್ಯಯನ ಮಾಡಲು ಇನ್ನೂ ಒಂದು ವಾರ ಕಾಲಾವಕಾಶ  ಇದೆ ” ಎಂದು ಹೇಳಿತು. ಪರೀಕ್ಷೆ ರದ್ದುಗೊಳಿಸಲು ಸಾಧ್ಯವಿಲ್ಲ ಮತ್ತು ನಿಗದಿಯಂತೆ ನಡೆಸಬೇಕು ಎಂದು ತಿಳಿಸಿತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]