Friday, April 16 , 2021
ಇಂದೂ ಕೂಡ ಮುಂದುವರೆದ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು (08.04.2021) : ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ಖಾಸಗಿ ಬಸ್ ಗಳನ್ನು ಬಳಸಲು ಅವಕಾಶ ನೀಡಿದ್ದರೆ, ಇತ್ತರ ಸಾರಿಗೆ ನೌಕರರೂ ಪಟ್ಟು ಬಿಡದೆ ಮುಷ್ಕರ ಮುಂದುವರಿಸಿದ್ದಾರೆ.

ಇಂದು ಯಾವುದೇ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಹೆಚ್ಚಿನೆಡೆ ಖಾಸಗಿ ಬಸ್ ಗಳನ್ನು ಬಳಸಲಾಗುತ್ತಿದ್ದು, ಪ್ರಯಾಣಿಕರು ಮಾತ್ರ ಪರದಾಡುವಂತಾಗಿದೆ. ಬುಧವಾರ ಸಂಜೆ ಸಾರಿಗೆ ನಿಗಮಗಳ ಉನ್ನತ ಅಧಿಕಾರಿಗಳು ಸಭೆ ನಡೆಸಿ, ಕರ್ತವ್ಯಕ್ಕೆ ಹಾಜರಾಗದ ತರಬೇತಿ ನೌಕರರನ್ನು ಕೈಬಿಡಲು ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಕೆಳ ಹಂತದ ಅಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಗಿದೆ.

ಇನ್ನು ಖಾಸಗಿ ಬಸ್ ಗಳೇ ಹೆಚ್ಚಾಗಿ ಓಡಾಡುವ ಕರಾವಳಿ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಇಲ್ಲವಾಗಿದೆ. ಬುಧವಾರ ಹೊರಜಿಲ್ಲೆಗಳಿಗೆ ಹೋಗುವ ಕೆಲ ಪ್ರಯಾಣಿಕರು ಪರದಾಡಿದರೂ, ಖಾಸಗಿ ಬಸ್ ಗಳನ್ನು ಬಳಸಿದ್ದರಿಂದ ದೊಡ್ಡ ಮಟ್ಟದ ತೊಂದರೆಯಾಗಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]