
ಶಿರಸಿ (23.02.2021) : ಜಿಲ್ಲಾ ಕೇಂದ್ರವನ್ನಾಗಿ ಮಾಡಲು ಎಲ್ಲ ಅನುಕೂಲತೆಗಳನ್ನು ಹೊಂದಿರುವ ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕೆಂಬ ಆಗ್ರಹ ಈಗ ಕೇಳಿ ಬರುತ್ತಿದೆ.
ಈ ಸಂಬಂಧ ನಾಳೆ ಶಿರಸಿ ಬಂದ್ ಗೆ ಕರೆ ನೀಡಲಾಗಿದೆ. 60ಕ್ಕೂ ಹೆಚ್ಚು ಸಂಘಟನೆಗಳು ಈ ಬಂದ್ ಗೆ ಬೆಂಬಲ ನೀಡಿವೆ. ಶಿರಸಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಸಹ ಬಂದ್ ಆಚರಿಸಲು ತೀರ್ಮಾನಿಸಲಾಗಿದೆ.
ಫೆಬ್ರವರಿ 24ರ ಬೆಳಗ್ಗೆ 10 ಗಂಟೆಗೆ ಶಿರಸಿ ನಗರದ ಹಳೆ ಬಸ್ ನಿಲ್ದಾಣದ ಅಂಚೆ ವೃತ್ತದಿಂದ ಬೃಹತ್ ಮೆರವಣಿಗೆ ನಡೆಯಲಿದೆ.