Sunday, September 19 , 2021
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ಬೆಂಗಳೂರು(14.09.2021): ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹೆಚ್ಚಿನ ಮಳೆಯಾಗುವ ಕಾರಣ ಸೆಪ್ಟಂಬರ್ 15 ರವರೆಗೆ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]