Friday, December 4 , 2020
ಅಪಘಾತಕ್ಕೀಡಾದ ಉಮಾಶ್ರೀ ಕಾರು: ಇಬ್ಬರು ಸಾವು

ಹುಬ್ಬಳ್ಳಿ (21.11.2020) : ಚಿತ್ರನಟಿ ಉಮಾಶ್ರೀ ಅವರ ಕಾರು ಅಫಘಾತವಾಗಿದ್ದು, ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಹಿನ್ನೆಕೆ ಉಮಾಶ್ರೀ ಅವರು ಸಂತಾಪ ಸೂಚಿಸಿದ್ದಾರೆ.

ತಾಲೂಕಿನ ಬಂಡಿವಾಡ ಬಳಿ ತಡರಾತ್ರಿ ಉಮಾಶ್ರೀಯವರಿಗೆ ಸೇರಿದ ಇನ್ನೋವಾ ಹಾಗೂ ಡಾ.ಸ್ಮಿತಾ ಕಟ್ಟಿ ಎಂಬುವವರ ಬೊಲೆನೋ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಡಾ. ಸ್ಮಿತಾ ಅವರ ತಾಯಿ ಶೋಭಾ ಕಟ್ಟಿ, ಚಾಲಕ ಸಂದೀಪ್​​ ವಿಭೂತಿಮಠ ಸಾವಿಗೀಡಾಗಿದ್ದಾರೆ.

ಉಮಾಶ್ರೀಯವರ ಕಾರು ಚಾಲಕ ಶಿವಕುಮಾರ ಬಿಡನಾಳ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತೀರಾ ನೋವುಂಟು ಮಾಡಿದೆ: ಉಮಾಶ್ರೀ
ಕಾರು ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದು ಹೆಚ್ಚು ನೋವುಂಟು ಮಾಡಿದೆ. ಕಳೆದುಕೊಂಡ ಕಾರುಗಳನ್ನು ಮತ್ತೊಮ್ಮೆ ಖರೀದಿಸಬಹುದು. ಆದರೆ, ಹೋದ ಜೀವ ಮತ್ತೆ ಮರಳಿ ಬರುವುದಿಲ್ಲ ಎಂದು ಉಮಾಶ್ರೀ ನೋವು ತೋಡಿಕೊಂಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]