Sunday, September 19 , 2021
‘ಮದ್ಯದಂಗಡಿ ಮುಚ್ಚದಿದ್ದರೆ ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ ‘

ಶಿವಮೊಗ್ಗ (14.09.2021) : ಗ್ರಾಮದಲ್ಲಿನ ಮದ್ಯದಂಗಡಿ ಮುಚ್ಚದ ಹೊರತು ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಶಿವಮೊಗ್ಗದ ಗ್ರಾಮವೊಂದರಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮಸ್ಥರು ಈ ಅಭಿಯಾನ ಆರಂಭಿಸಿದ್ದಾರೆ.

ಮದ್ಯ ಮಳಿಗೆ ಬಂದ್ ಮಾಡದ ಹೊರತು ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಮದ್ಯದಂಗಡಿ ವಿರೋಧಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದರು. ಈ ವೇಳೆ ಅಧಿಕಾರಿಗಳು ಮದ್ಯದಂಗಡಿ ಬಂದ್ ಮಾಡಿ, ಮತದಾನ ಮಾಡುವಂತೆ ಮನವೊಲಿಸಿದ್ದರು.

ಇದೀಗ ಮತ್ತೇ ಗ್ರಾಮದಲ್ಲಿ ಎಂಎಸ್‌ಐಎಲ್ ಮಳಿಗೆ ಆರಂಭಿಸಲಾಗಿದೆ.ಹೀಗಾಗಿ ಬೆಳ್ಳಿಕೊಪ್ಪ ಗ್ರಾಮಸ್ಥರು ಹೊಸ ರೀತಿಯ ಹೋರಾಟ ಆರಂಭಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]