
ದುಬೈ(1.2.2021) : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಸಿಡ್ನಿ ಟೆಸ್ಟ್ ನಂತರ ಐಸಿಸಿ ನೂತನ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕ ಬಿಡುಗಡೆ ಮಾಡಿದೆ. ಭಾರತದ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸಿದ ಸ್ಟೀವ್ ಸ್ಮಿತ್ ಕೊಲ್ಲಿಯನ್ನು ಹಿಂದಿಕ್ಕಿ ಎರಡನೇ ಸ್ಥಾನ ಪಡೆದಿದ್ದಾರೆ.
ಇನ್ನು ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಸ್ಥಾನದಲ್ಲಿದ್ರೆ. ಟೆಸ್ಟ್ ಸರಣಿಯಿಂದ ಹೊರಬಂದಿರುವ ಕೊಹ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಮೂರನೇ ಟೆಸ್ಟ್ ನಲ್ಲಿ ಎರಡು ಅರ್ಧಶತಕ ಬಾರಿಸಿದ ಪುಜಾರ 8ನೇ ಸ್ಥಾನಕ್ಕೆ ಬಡ್ತಿ ಪಡೆದರೆ, ರಹಾನೆ ಒಂದು ಸ್ಥಾನ ಕುಸಿದು 7 ರಲ್ಲಿದ್ದಾರೆ.
ಬೌಲಿಂಗ್ನಲ್ಲಿ ಆಸ್ಟ್ರೇಲಿಯಾದ ಬೌಲರ್ ಪ್ಯಾಟ್ ಕಮ್ಮಿನ್ಸ್ ಪ್ರಥಮ ಸ್ಥಾನದಲ್ಲಿದ್ದಾರೆ. ಬ್ರಾಡ್ ಮತ್ತು ವ್ಯಾಗ್ನರ್ 2ಮತ್ತು 3 ರಲ್ಲಿದ್ದಾರೆ. ಭಾರತದ ಅಶ್ವಿನ್ ಮತ್ತು ಬುಮ್ರಾ ಕ್ರಮವಾಗಿ 9 ಮತ್ತು 10 ರಲ್ಲಿದ್ದಾರೆ.